ಖಾಲಿ ಬಿಂದಿಗೆ ಹಿಡಿದು ಪ್ರತಿಭಟನೆ

ಖಾಲಿ ಬಿಂದಿಗೆ ಹಿಡಿದು ಪ್ರತಿಭಟನೆ
Published on

ಹನೂರು: ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಸೋಮವಾರ ತಾಲೂಕಿನ ಬಂಡಳ್ಳಿ ಗ್ರಾಮದ 4ನೇ ವಾರ್ಡಿನ ನಿವಾಸಿಗಳು ಗ್ರಾಮ ಪಂಚಾಯಿತಿ ಕಚೇರಿಗೆ ಖಾಲಿ ಬಿಂದಿಗೆಯೊಂದಿಗೆ ಆಗಮಿಸಿ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ನಿವಾಸಿಗಳು ಮಾತನಾಡಿ, ಗ್ರಾಮದ ಬೇರೆ ವಾರ್ಡ್‌ನ ತೊಂಬೆಗಳಿಗೆ ಸಮರ್ಪಕವಾಗಿ ಕುಡಿಯುವ ನೀರನ್ನು ಪೂರೈಕೆ ಮಾಡಲಾಗುತ್ತಿದೆ. ಆದರೆ, 4ನೇ ವಾರ್ಡಿನ ತೊಂಬೆಗಳಿಗೆ ಕಳೆದ 2 ತಿಂಗಳಿನಿಂದ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆಯಾಗುತ್ತಿಲ್ಲ. ಇದರಿಂದ ವಾರ್ಡ್‌ನ್ನು ಕಡೆಗಣಿಸಲಾಗಿದೆ. ಹಾಗಾಗಿ ಕುಡಿಯುವ ನೀರಿನ ಸಮಸ್ಯೆ ತಲೆದೂರಿದೆ. ಈ ಬಗ್ಗೆ ಗ್ರಾಪಂ ಅಧಿಕಾರಿಗಳಿಗೆ ಹಲವು ಬಾರಿ ತಿಳಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.

ಪರಿಣಾಮ ಸಂಕ್ರಾಂತಿ ಹಬ್ಬದಲ್ಲೂ ನೀರಿಗಾಗಿ ತೊಂದರೆ ಪಡುವಂತಾಗಿದೆ. ಇದರಿಂದ ಬೇಸತ್ತು ಗ್ರಾಪಂಗೆ ಆಗಮಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಸಂಬಂಧಪಟ್ಟವರು ಇನ್ನಾದರೂ ಗಮನಹರಿಸಿ ವಾರ್ಡಿನಲ್ಲಿ ತಲೆದೂರಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಬೇಕು. ತಪ್ಪಿದಲ್ಲಿ ಮುಂದಿನ ಸೋಮವಾರ ಗ್ರಾಪಂ.ಗೆ ಬೀಗ ಜಡಿದು ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ಮಹೇಂದ್ರ, ಶಿವು, ಜಗದೀಶ್, ಪುಟ್ಟರಾಜು, ರವಿ, ಲಕ್ಷ್ಮೀಪತಿ, ಮಹೇಶ್, ಸ್ವಾಮಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net