ನೋಡಲ್ ಅಧಿಕಾರಿ ನೇಮಕ ಆದೇಶ ಹಿಂಪಡೆಯಿರಿ

10HSN3
Published on

ಅಂಗವಿಕಲರು ಸ್ವಾವಲಂಬಿ ಬದುಕು ಕಟ್ಟಿಕೊಂಡು ಸಮಾಜಕ್ಕೆ ಮಾದರಿಯಾಗಿದ್ದಾರೆ. ಇಂತಹ ನೌಕರರಿಗೆ ಸರ್ಕಾರ ತೊಂದರೆ ನೀಡುವುದು ಸರಿಯಲ್ಲ ಎಂದರು. ಜಿಲ್ಲಾಧಿಕಾರಿ ಆರ್.ಗಿರೀಶ್ ಅವರಿಗೆ ಮನವಿ ಸಲ್ಲಿಸಿದರು. ಒಕ್ಕೂಟದ ಪದಾಧಿಕಾರಿಗಳಾದ ಕೆ. ಸುಬ್ರಮಣ್ಯಂ, ಎಸ್.ಕೃಷ್ಣಪ್ಪ, ಜಿ.ದೇವರಾಜು, ಬಿ.ವಿ.ಹರೀಶ್ ಇತರರಿದ್ದರು.

ರಾಜ್ಯಾದ್ಯಂತ 4906 ಅಂಗವಿಕಲರು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 169 ಜನರು ತಾಲೂಕು ಪಂಚಾಯಿತಿಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ ಈ ಎಲ್ಲ ಹುದ್ದೆಗಳ ಮೇಲುಸ್ತುವಾರಿಯನ್ನು ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗೆ ವಹಿಸುತ್ತಿರುವುದು ಖಂಡನೀಯ. ಇದರಿಂದ ಹಂತ ಹಂತವಾಗಿ ಅಂಗವಿಕಲರ ಮೇಲೆ ಸವಾರಿ ನಡೆಸಲು ಅವಕಾಶ ಮಾಡಿಕೊಟ್ಟಂತೆ ಆಗುತ್ತದೆ. ಕೋವಿಡ್-19 ಸಂದರ್ಭದಲ್ಲಿ ಎಲ್ಲರೂ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಾರೆ. ಗ್ರಾಮ ಮಟ್ಟದಲ್ಲಿ ಆಗಬೇಕಿರುವ ಕೆಲಸವನ್ನು ಅಚ್ಚುಕಟ್ಟಾಗಿ ನಿಭಾಯಿಸಲಾಗುತ್ತಿದೆ. ಆದ್ದರಿಂದಲೇ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಕಲ್ಯಾಣ ಇಲಾಖೆಗೆ ಎರಡು ಬಾರಿ ರಾಷ್ಟ್ರೀಯ ಪ್ರಶಸ್ತಿ ಬಂದಿದೆ ಎಂದರು.

ಅಂಗವಿಕಲರ ಯೋಜನೆಗಳ ನೋಡಲ್ ಅಧಿಕಾರಿಯನ್ನಾಗಿ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಯನ್ನು ನೇಮಿಸಿ ಹೊರಡಿಸಿರುವ ಆದೇಶ ಅವೈಜ್ಞಾನಿಕವಾಗಿದ್ದು, ಕೂಡಲೇ ಸರ್ಕಾರ ಅದನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ರಾಜ್ಯ ಅಂಗವಿಕಲರ ಹಾಗೂ ವಿವಿಧೋದ್ದೇಶ ಗ್ರಾಮೀಣ ಪುನರ್ವಸತಿ ಒಕ್ಕೂಟದಿಂದ ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ಮೌನ ಪ್ರತಿಭಟನೆ ನಡೆಸಲಾಯಿತು.

ವಿಜಯವಾಣಿ ಸುದ್ದಿಜಾಲ ಹಾಸನ

ಸಹಿ ಸಂಗ್ರಹ ಅಭಿಯಾನ:
ಕನ್ನಡ ಚಿತ್ರರಂಗದಲ್ಲಿ ಸದ್ದು ಮಾಡುತ್ತಿರುವ ಡ್ರಗ್ಸ್ ಮಾಫಿಯಾ ಪ್ರಕರಣವನ್ನು ಉನ್ನತ ತನಿಖೆಗೆ ವಹಿಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನಿಂದ ಗುರುವಾರ ಸಹಿ ಸಂಗ್ರಹ ಅಭಿಯಾನ ನಡೆಸಲಾಯಿತು.
ನಗರದ ಹೇಮಾವತಿ ಪ್ರತಿಮೆ ಎದುರು ಜಮಾಯಿಸಿದ ಎಬಿವಿಪಿ ಕಾರ್ಯಕರ್ತರು, ದುಶ್ಚಟಗಳ ದಾಸರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದರು.
ಪ್ರಭಾವಿ ರಾಜಕಾರಣಿ ಹಾಗೂ ಅವರ ಮಕ್ಕಳು ಡ್ರಗ್ಸ್ ದಂಧೆಯಲ್ಲಿ ತೊಡಗಿರುವ ಸಂಶಯ ವ್ಯಕ್ತವಾಗಿದೆ. ಪರದೆ ಮೇಲಿನ ಕಲಾವಿದರನ್ನು ಗೌರವದಿಂದ ಕಾಣುತ್ತಿದ್ದ ಸಮಾಜ ತಲೆ ತಗ್ಗಿಸುವಂತಾಗಿದೆ. ಕಾಲೇಜುಗಳಲ್ಲಿ ಡ್ರಗ್ಸ್ ಜಾಲ ಹರಡಿರುವ ಸುದ್ದಿಗಳು ಭಯ ಹುಟ್ಟಿಸಿದೆ ಎಂದರು.
ಯಾವ ಕಾರಣಕ್ಕೂ ಪ್ರಕರಣ ದಿಕ್ಕು ತಪ್ಪದಂತೆ ಎಚ್ಚರ ವಹಿಸಬೇಕು. ಮಾದಕ ವಸ್ತುಗಳ ಸಾಗಣೆ, ಮಾರಾಟ ಹಾಗೂ ಸೇವನೆಯಲ್ಲಿ ತೊಡಗಿದ ಎಲ್ಲರಿಗೂ ಕಾನೂನು ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದರು.
ಎಬಿವಿಪಿ ಜಿಲ್ಲಾ ಸಂಚಾಲಕ ಬೊಮ್ಮಣ್ಣಗೌಡ, ಪ್ರಮೋದ್ ಹಾಗೂ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net