

ನುಗ್ಗೇಹಳ್ಳಿ: ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಡಾ. ವೀರೇಂದ್ರ ಹೆಗ್ಗಡೆ ವಿರುದ್ಧ ಷಡ್ಯಂತ್ರ, ಅಪಪ್ರಚಾರ ನಡೆಸುತ್ತಿರುವವರನ್ನು ಕೂಡಲೇ ಬಂಧಿಸುವಂತೆ ಹೋಬಳಿ ಕೇಂದ್ರದ ಶ್ರೀ ಪಂಚಲಿಂಗೇಶ್ವರ ಪಾದಯಾತ್ರೆಗಳ ಸೇವಾ ಸಮಿತಿ ಹಾಗೂ ವಿವಿಧ ಸಂಘಟನೆಗಳು, ಭಕ್ತರು ಹೋಬಳಿ ಕೇಂದ್ರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ಪ್ರತಿಭಟನಾಕಾರು ಇತ್ತೀಚೆಗೆ ಗ್ರಾಮದ ಶ್ರೀ ಕಲ್ಯಾಣಿ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ನಂತರ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಜಾಥಾ ನಡೆಸಿದರು.
ಪುರವರ್ಗ ಹಿರೇಮಠದ ಡಾ.ಮಹೇಶ್ವರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, 2 ವರ್ಷಗಳಿಂದ ನಿರಂತರವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಕುಟುಂಬದ ವಿರುದ್ಧ ಅಪಪ್ರಚಾರ ಹಾಗೂ ಷಡ್ಯಂತ್ರ ಮಾಡಲಾಗುತ್ತಿದೆ. ಸರ್ಕಾರ ಯಾವುದೇ ಮುಲಾಜಿಗೆ ಒಳಗಾಗದೆ ಕೇವಲ ಕರ್ನಾಟಕವಲ್ಲದೆ ದೇಶದ ಪವಿತ್ರ ಪುಣ್ಯ ಕ್ಷೇತ್ರವಾಗಿರುವ ಧರ್ಮಸ್ಥಳವನ್ನು ಅಪವಿತ್ರ ಮಾಡಲು ಹೊರಟಿರುವ ದುಷ್ಟರನ್ನು ಶೀಘ್ರ ಬಂಧಿಸಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ನಾಗರಿಕ ವೇದಿಕೆ ಅಧ್ಯಕ್ಷ ತೋಟಿ ನಾಗರಾಜ್ ಮಾತನಾಡಿ, ಮುಂಬರುವ ದಿನಗಳಲ್ಲೂ ಹೀಗೆ ಮುಂದುವರೆದರೆ ಷಡ್ಯಂತ್ರ ನಡೆಸುತ್ತಿರುವ ವಿರುದ್ಧ ಮತ್ತು ರಾಜ್ಯ ಸರ್ಕಾರದ ಧೋರಣೆಯ ವಿರುದ್ಧ ಬೀದಿಗಿಳಿದು ಪ್ರತಿಭಟಿಸ ಬೇಕಾಗುತ್ತದೆ ಎಂದು ಎಚ್ಚರಿಸಿದರು.
ಹೋಬಳಿ ವೀರಶೈವ ಸಮಾಜದ ಅಧ್ಯಕ್ಷ ಎಸ್.ಎಸ್.ಗಿರೀಶ್ ಪಂಚಲಿಂಗೇಶ್ವರ ಪಾದಯಾತ್ರೆ ಸಮಿತಿ ಅಧ್ಯಕ್ಷ ಹೋಟೆಲ್ ರಾಜಣ್ಣ ಮಾತನಾಡಿದರು. ನಂತರ ನಾಡಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು, ತಪ್ಪಿತಸ್ಥರ ವಿರುದ್ಧ ಸರ್ಕಾರ ಕ್ರಮ ಕೆಗೊಳ್ಳಬೇಕೆಂದು ಒತ್ತಾಯಿಸಿ ಉಪತಹಸೀಲ್ದಾರ್ ಪೂರ್ಣಿಮಾ ಅವರ ಮೂಲಕ ಮನವಿ ಸಲ್ಲಿಸಿದರು.
ಗ್ರಾಪಂ ಅಧ್ಯಕ್ಷ ಎನ್.ಆರ್.ಶಿವಕುಮಾರ್, ಸದಸ್ಯರಾದ ಹೊನ್ನೇಗೌಡ, ಎಸ್.ಎಸ್.ಮಂಜುನಾಥ್, ನಟರಾಜ್ ಯಾದವ್, ಮುಖಂಡರಾದ ಎನ್.ಜೆ.ಸೋಮನಾಥ್, ಕಾಂಗ್ರೆಸ್ ಮುಖಂಡರಾದ ಫೈನಾನ್ಸ್ ಪ್ರಕಾಶ್, ಬಾಣನಕೆರೆ ಅಶೋಕ್, ಎಚ್.ಜೆ .ಕಿರಣ್, ಎನ್.ಸಿ.ನಟೇಶ್, ಮಹಮ್ಮದ್ ಜಾವಿದ್, ಕೃಪಾಶಂಕರ್, ಎನ್.ಸಿ. ಕುಮಾರಸ್ವಾಮಿ, ಎಂ.ಎಸ್.ಸುರೇಶ್, ಚಿರಂಜೀವಿ, ಪಂಚಲಿಂಗೇಶ್ವರ ಪಾದಯಾತ್ರೆ ಸಮಿತಿ ಗೌರವಾಧ್ಯಕ್ಷ ದೊಡ್ಡೇಗೌಡ, ಉಪಾಧ್ಯಕ್ಷ ಮುದ್ದನಹಳ್ಳಿ ರಾಜಣ್ಣ, ಖಜಾಂಚಿ ವಿಮಲ್ ಸೇಟ್, ಸದಸ್ಯರಾದ ರವಿಶಾಚಾರ್, ಕಂಪನಿ ಗೌಡ್ರು ಲೋಕೇಶ್, ಗಣೇಶ್, ಪುರಿಗುಂಡ, ಗೋಪಿ, ಉಮೇಶ್, ಎನ್.ಪಿ ಪ್ರದೀಪ್, ಎನ್ ಆರ್ ಪ್ರದೀಪ್, ವಿರೂಪಾಕ್ಷ, ಮರಿ ಶೆಟ್ಟಿಹಳ್ಳಿ ಸತೀಶ್, ಬಂಡೆಕೇರಿ ಆನಂದ್, ರವಿ , ಬಾಬು, ದೀಪಕ್, ಸೇರಿದಂತೆ ವಿವಿಧ ಸಂಘಟನೆಗಳ ಸದಸ್ಯರು ಹಾಗೂ ಭಕ್ತರು ಪಾಲ್ಗೊಂಡಿದ್ದರು.