

ಬೆಳಗಾವಿ:ಇಲ್ಕಿನ ಶಿವಬಸವ ನಗರದಲ್ಲಿ ಇತ್ತೀಚೆಗೆ ಯುವಕನ ಹತ್ಯೆ ಮಾಡಿದ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಒತ್ತಾಯಿಸಿ ಕರವೇ ಕಾರ್ಯಕರ್ತರು ಸೋಮವಾರ ಚನ್ನಮ್ಮ ವೃತ್ತದಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಶಿವಬಸವ ನಗರದಲ್ಲಿ ನಾಗರಾಜ ಗಾಡಿವಡ್ಡರ ಯುವಕನನ್ನು ಮೂವರು ಅಮಾನುಷ್ಯವಾಗಿ ಹತ್ಯೆ ಮಾಡಿದ್ದಾರೆ. ಇವರನ್ನು ಪೊಲೀಸರು ಬಂಧಿಸಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ಕೊಲೆ ಮಾಡಿರುವ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ, ನಾಗೇಶ ಅಷ್ಟೇಕರ, ಶೆಟ್ಟಪ್ಪ ಕಾಲಕರ, ಭೀಮರಾವ ಪಾತ್ರೋಟ, ಗುಂಡು ಬಡಸ್ಕರ್ ಸೇರಿದಂತೆ ಇನ್ನಿತರರು ಇದ್ದರು.