ಅಂಗನವಾಡಿ ನೌಕರರ ಪ್ರತಿಭಟನೆ

8
Published on

ಮೈಸೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಂಗನವಾಡಿ ನೌಕರರ ಸಂಘದಿಂದ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಯಿತು.

ಐಸಿಡಿಎಸ್ ಯೋಜನೆಗೆ ಅನುದಾನ ಹೆಚ್ಚಿಸಿ ಮಕ್ಕಳ ಮತ್ತು ಮಹಿಳೆಯರ ಹಿತ ಕಾಯಬೇಕು. ಅಂಗನವಾಡಿ ನೌಕರರಿಗೆ ಗುಣಮಟ್ಟದ ಸ್ಯಾನಿಟೈಸರ್, ಮಾಸ್ಕ್, ಪಿಪಿಇ ಕಿಟ್‌ಗಳನ್ನು ಒದಗಿಸಬೇಕು. ಅಂಗನವಾಡಿ ಕೇಂದ್ರಗಳು ಮತ್ತು ತೂಕದ ಯಂತ್ರಗಳನ್ನು ಸ್ಯಾನಿಟೈಸ್ ಮಾಡಿಸಬೇಕು ಎಂದು ಪ್ರತಿಭಟನಾನಿರತರು ಆಗ್ರಹಿಸಿದರು.

ಕರೊನಾ ಸಂಕಷ್ಟ ಕಾಲದಲ್ಲಿ ದುಡಿಯುತ್ತಿರುವ ಅಂಗನವಾಡಿ ನೌಕರರಿಗೆ 25 ಸಾವಿರ ರೂ. ಪ್ರೋತ್ಸಾಹ ಧನ ನೀಡಬೇಕು. ಸ್ಥಳೀಯ ಸಾರಿಗೆ ಬಸ್ ಪಾಸ್ ಮತ್ತು ಊಟದ ವೆಚ್ಚ ಭರಿಸಬೇಕು. ಎಲ್‌ಐಸಿ ಆಧರಿತ ನಿವೃತ್ತಿ ವೇತನ ನೀಡಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಸಂಘದ ಜಿಲ್ಲಾ ಸಮಿತಿ ಅಧ್ಯಕ್ಷೆ ಎಚ್.ಎಸ್.ಸುನಂದಾ, ಪ್ರಧಾನ ಕಾರ್ಯದರ್ಶಿ ಕೆ.ಪಿ.ಕಾವೇರಮ್ಮ, ಖಜಾಂಚಿ ಧರ್ಮಾವತಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net