ಅರೇಹಳ್ಳಿ ಗ್ರಾಮಸ್ಥರ ಪ್ರತಿಭಟನೆ

15HSN1 (1)
Published on

ಹಾಸನ: ಬೇಲೂರು ತಾಲೂಕಿನ ಅರೇಹಳ್ಳಿ ಕೃಷಿ ಪತ್ತಿನ ಸಹಕಾರ ಬ್ಯಾಂಕ್‌ನಲ್ಲಿ ಅವ್ಯವಹಾರ ನಡೆದಿದ್ದು, ತನಿಖೆ ಮೂಲಕ ಸತ್ಯ ಬಹಿರಂಗಪಡಿ ಸಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ಬುಧವಾರ ಕುವೆಂಪುನಗರದಲ್ಲಿರುವ ಸಹಕಾರ ಸಂಘಗಳ ಉಪನಿಬಂಧಕರಿಗೆ ಮನವಿ ಸಲ್ಲಿಸಿದರು.

ಬ್ಯಾಂಕ್ ವ್ಯವಸ್ಥಾಪಕ ರೈತರ ಹೆಸರಿನಲ್ಲಿ ಲಕ್ಷಾಂತರ ರೂ. ಕೊಳ್ಳೆ ಹೊಡೆದಿದ್ದಾರೆ. ಸಾಲ ಮನ್ನಾ ಮಾಡುವ ನೆಪದಲ್ಲಿ ನಾಲ್ಕೈದು ಸಲ ಬ್ಯಾಂಕ್‌ನ ಖಾಲಿ ಚೆಕ್-ಸ್ಲಿಪ್, ವೋಚರ್‌ಗಳಿಗೆ ಸಹಿ ಮಾಡಿಸಿಕೊಂಡು ಅನಕ್ಷರಸ್ಥ ರೈತರಿಗೆ ಮೋಸ ಮಾಡಿದ್ದಾರೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.

ಆರ್‌ಟಿಜಿಎಸ್‌ನಿಂದ ಹೆಚ್ಚುವರಿ ಹಣವನ್ನು ರೈತರ ಖಾತೆಗೆ ಪಾವತಿಸಿ ಅವರೇ ಡ್ರಾ ಮಾಡಿಕೊಂಡಿದ್ದಾರೆ. ನಕಲಿ ಕಿಸಾನ್ ಕಾರ್ಡ್‌ಗಳನ್ನು ಬಳಸಿ ಹಣ ಡ್ರಾ ಮಾಡಲಾಗಿದೆ. ಅನೇಕರಿಗೆ ಹಣ ನೀಡುವಲ್ಲಿ ಪಂಗನಾಮ ಹಾಕಿದ್ದು, ನ್ಯಾಯ ಕೇಳಲು ಹೋದಾಗ ಉಡಾಫೆ ಉತ್ತರ ನೀಡಿದ್ದಾರೆ. ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಅನ್ಯಾಯಕ್ಕೊಳಗಾಗಿರುವ ರೈತರಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಆಗ್ರಹಿಸಿದರು.

ಜಿಪಂ ಮಾಜಿ ಸದಸ್ಯ ಅಮಿತ್ ಶೆಟ್ಟಿ, ವಾಟೆಹಳ್ಳಿ ಚಂದ್ರಶೇಖರ್, ಸುರೇಶ್, ಚಂದ್ರಶೇಖರ್, ಎಂ.ಪಿ. ರಾಮಣ್ಣ, ಗುರಪ್ಪರಾಜು, ಪ್ರಕಾಶ್ ಅರೇಹಳ್ಳಿ, ರಾಮಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net