ಬೀದಿಬದಿ ವ್ಯಾಪಾರಿಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ

ಯಲಬುರ್ಗಾದಲ್ಲಿ ಕರ್ನಾಟಕ ಬೀದಿಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಪಂ ಮುಖ್ಯಾಧಿಕಾರಿ ನಾಗೇಶಗೆ ಮನವಿ ಸಲ್ಲಿಸಲಾಯಿತು. ಪ್ರಮುಖರಾದ ಗೌಸುಸಾಬ್, ಯಮನೂರ ನಾಯಕ ಇತರರಿದ್ದರು.
ಯಲಬುರ್ಗಾದಲ್ಲಿ ಕರ್ನಾಟಕ ಬೀದಿಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಪಂ ಮುಖ್ಯಾಧಿಕಾರಿ ನಾಗೇಶಗೆ ಮನವಿ ಸಲ್ಲಿಸಲಾಯಿತು. ಪ್ರಮುಖರಾದ ಗೌಸುಸಾಬ್, ಯಮನೂರ ನಾಯಕ ಇತರರಿದ್ದರು.
Published on

ಯಲಬುರ್ಗಾ: ಅನೇಕ ವರ್ಷಗಳಿಂದ ರಸ್ತೆ ಪಕ್ಕದಲ್ಲಿ ಸಣ್ಣ ಪುಟ್ಟ ವ್ಯಾಪಾರ ಮಾಡಿಕೊಂಡು ಉಪಜೀವನ ನಡೆಸುವವರಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಪಟ್ಟಣದಲ್ಲಿ ಕರ್ನಾಟಕ ಬೀದಿಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದಿಂದ ಎಲ್ಲ ಅಂಗಡಿಗಳನ್ನು ಬಂದ್ ಮಾಡಿ ಧರಣಿ ನಡೆಸಿ ಪಪಂ ಮುಖ್ಯಾಧಿಕಾರಿ ನಾಗೇಶಗೆ ಗುರುವಾರ ಮನವಿ ಸಲ್ಲಿಸಲಾಯಿತು.

ಬೀದಿ ವ್ಯಾಪಾರಿಗಳ ಅಧಿನಿಯಮ 2014 (ಜೀವನೋಪಾಯ ಸಂರಕ್ಷಣೆ ಮತ್ತು ಬೀದಿ ವ್ಯಾಪಾರಿ ವಿನಿಯಂತ್ರಣ) ಕಾಯ್ದೆ ಉಲ್ಲಂಘನೆ ಮಾಡುತ್ತಿರುವ ಮುಖ್ಯಾಧಿಕಾರಿಗಳು ಬೀದಿ ವ್ಯಾಪಾರಿಸ್ಥರಿಗೆ ಕಿರುಕುಳ ನೀಡುತ್ತಿದ್ದಾರೆ. ಪಟ್ಟಣದಲ್ಲಿ ಜಾಗದ ಇಲ್ಲದ ಕಾರಣ ಸಣ್ಣ ವ್ಯಾಪಾರಸ್ಥರು ಬೀದಿಬದಿ ವ್ಯಾಪಾರ ಮಾಡುತ್ತಿದ್ದಾರೆ. ತಾತ್ಕಲ್ ಸಮಿತಿ ರಚಿಸದೆ, ವ್ಯಾಪಾರಸ್ಥರೊಂದಿಗೆ ಚರ್ಚಿಸದೆ ಬೀದಿಬದಿ ವ್ಯಾಪಾರಸ್ಥರನ್ನು ಒಕ್ಕಲೆಬ್ಬಿಸುವ ಉನ್ನಾರ ಮಾಡುತ್ತಿದ್ದಾರೆ. ಇದರಿಂದ ಸಾಲ ಮಾಡಿ ವ್ಯಾಪಾರಿ ಮಾಡುತ್ತಿರುವವರಿಗೆ ಸಂಕಷ್ಟ ಎದುರಾಗಿದೆ. ಹೀಗಾಗಿ ಬೀದಿಬದಿ ವ್ಯಾಪಾರಸ್ಥರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿಕೊಡಬೇಕು. ಇಲ್ಲವಾದರೆ ನಿರಂತರ ಮುಷ್ಕರ ಕೈಗೊಳ್ಳುವುದಾಗಿ ಎಚ್ಚರಿಸಿರು. ಪ್ರಮುಖರಾದ ಗೌಸುಸಾಬ್, ಯಮನೂರ ನಾಯಕ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net