ವನ್ಯಪ್ರಾಣಿ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸಿ

dl ashok
Published on

ಮೂಡಿಗೆರೆ: ತಾಲೂಕಿನಲ್ಲಿ ಕಾಡಾನೆ, ಕಾಡುಕೋಣ ಮತ್ತಿತರೆ ಕಾಡುಪ್ರಾಣಿಗಳ ಹಾವಳಿಯಿಂದ ರೈತರು ತಮ್ಮ ಜಮೀನುಗಳನ್ನು ಪಾಳು ಬಿಡುವಂತಾಗಿದೆ. ಕೂಲಿ ಕಾರ್ಮಿಕರು ಕೆಲಸಕ್ಕೆ, ವಿದ್ಯಾರ್ಥಿಗಳು ಶಾಲೆ-ಕಾಲೇಜಿಗೆ ತೆರಳಲು ಭಯ ಪಡುತ್ತಿದ್ದಾರೆ. ಕಾಡುಪ್ರಾಣಿಗಳ ಹಾವಳಿಗೆ ಸರ್ಕಾರ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಡಿ.ಎಲ್.ಅಶೋಕ್ ಕುಮಾರ್ ಒತ್ತಾಯಿಸಿದ್ದಾರೆ.

ಈ ಹಿಂದೆ ತತ್ಕೊಳ, ಕುಂದೂರು, ಸಾರಗೋಡು, ಬಿಳ್ಳೂರು, ಹೊಸಕೆರೆ, ಊರುಬಗೆ, ಸತ್ತಿಗನಹಳ್ಳ, ಬೈರಾಪುರ ಭಾಗದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿತ್ತು. ಅರಣ್ಯ ಪ್ರದೇಶದಿಂದ ಜನವಸತಿ ಪ್ರದೇಶ ಹಾಗೂ ಕಾಫಿ ತೋಟ, ಭತ್ತದಗದ್ದೆಗಳಿ ಲಗ್ಗೆಯಿಟ್ಟು ಬೆಳೆ, ಸಾರ್ವಜನಿಕ ಆಸ್ತಿಪಾಸ್ತಿಗಳನ್ನು ಹಾಳು ಮಾಡಿ ಸಾರ್ವಜನಿಕರನ್ನು ತುಳಿದು ಕೊಂದುಹಾಕಿದೆ. ಈಗ ಬೇಲೂರು, ಸಕಲೇಶಪುರ ಭಾಗದಿಂದ ತಾಲೂಕಿಗೆ ಹಿಂಡುಗಟ್ಟಲೆ ಕಾಡಾನೆಗಳು ಬರುತ್ತಿರುವುದರಿಂದ ತಾಲೂಕಿನ ಎಲ್ಲ ಗ್ರಾಮಗಳಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದೆ. ಕಳೆದವಾರ ಬೈದುವಳ್ಳಿ ಗ್ರಾಮದಲ್ಲಿ ಕಾಡಾನೆಯೊಂದು ಕೂಲಿ ಕಾರ್ಮಿಕರೊಬ್ಬರನ್ನು ಸೊಂಡಿಲಿನಿಂದ ಎತ್ತಿ ದೂರಕ್ಕೆ ಎಸೆದಿದೆ ಅವರು ಓಡಿ ತಪ್ಪಿಸಿಕೊಂಡಿದ್ದರಿಂದ ಪ್ರಾಣ ಉಳಿದಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net