ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಎಸ್‌ಸಿ, ಎಸ್‌ಟಿ ಕುಂದು ಕೊರತೆ ನಿವಾರಣಾ ಸಭೆಯನ್ನು ಪ್ರತೀ ಮೂರು ತಿಂಗಳಿಗೊಮ್ಮೆ ನಡೆಸಬೇಕೆಂದು ಇದ್ದರೂ, ಜಿಲ್ಲೆಯಲ್ಲಿ ಸಭೆ ಆಗದೇ ಹಲವು ತಿಂಗಳುಗಳೇ ಕಳೆದಿದೆ. ಪೊಲೀಸ್ ಇಲಾಖೆಯಿಂದ ನಡೆಯುವ ಸಭೆಯಲ್ಲಿ ಭೂಮಿ-ಕಂದಾಯ ವಿಭಾಗದ ಸಮಸ್ಯೆಗಳು ಹೆಚ್ಚಿರುವುದರಿಂದ ಇದರ ಪರಿಹಾರ ಜಿಲ್ಲಾಧಿಕಾರಿ, ಕಂದಾಯ ಅಧಿಕಾರಿಗಳ ಹಂತದಲ್ಲಿ ನಡೆಯಬೇಕಾಗಿದ್ದು, ಆದ್ದರಿಂದ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಕೂಡಲೇ ಎಸ್‌ಸಿ, ಎಸ್‌ಟಿ ಸಭೆ ಕರೆಯಬೇಕು ಹಾಗೂ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಪ್ರತೀ ಮೂರು ತಿಂಗಳಿಗೊಮ್ಮೆ ನಿರಂತರ ಸಭೆ ನಡೆಸಬೇಕು ಎಂದು ಮುಖಂಡರು ಆಗ್ರಹಿಸಿದರು.