ಸಮರ್ಪಕವಾಗಿ ಜನನ, ಮರಣ ಪ್ರಮಾಣ ಪತ್ರ ನೀಡಿ

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಹಮ್ಮಿಕೊಂಡಿದ್ದ ಸಭೆಯಲ್ಲಿ ಜಿಲ್ಲಾಧಿಕಾರಿ ಪಿ.ಎನ್​.ರವೀಂದ್ರ ಜಿಲ್ಲಾ ಅಂಕಿ ಅಂಶಗಳ ನೋಟ ಮತ್ತು ಸಾಮಾಜಿಕ ಹಾಗೂ ಆರ್ಥಿಕ ಆವಲೋಕನ ಪುಸ್ತಕವನ್ನು ಬಿಡುಗಡೆಗೊಳಿಸಿದರು. ಜಿಪಂ ಸಿಇಒ ಪ್ರಕಾಶ್​ ಜಿ.ಟಿ.ನಿಟ್ಟಾಲಿ, ಜಿಲ್ಲಾ ಸಂಖ್ಯಾ ಸಂಗ್ರಹಣ ಇಲಾಖೆಯ ಸಹಾಯಕ ನಿರ್ದೇಶಕ ಸಿ.ಎಲ್​.ಶಿವಕುಮಾರ್​ ಮತ್ತಿತರರು ಇದ್ದರು.
Samarpakavagi Janana, Marana Pramana patra Needi
Published on

ಸಮನ್ವಯ ಸಮಿತಿ ಸಭೆಯಲ್ಲಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ರವೀಂದ್ರ ಸೂಚನೆ

ವಿಜಯವಾಣಿ ಸುದ್ದಿಜಾಲ ಚಿಕ್ಕಬಳ್ಳಾಪುರ
ಜಿಲ್ಲೆಯಲ್ಲಿ ಜನರ ಜನನ&ಮರಣಗಳ ಬಗ್ಗೆ ಅಧಿಕೃತ ದಾಖಲೆಗಳೊಂದಿಗೆ ರ್ನಿದಿಷ್ಟ ಅವಧಿಯಲ್ಲಿ ಸಮರ್ಪಕವಾಗಿ ನೋಂದಾಯಿಸಲು ಜಿಲ್ಲಾಧಿಕಾರಿ ಪಿ.ಎನ್​.ರವೀಂದ್ರ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಡಳಿತ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಜನನ ಮರಣ, ನೋಂದಣಿಯ ಸಮನ್ವಯ ಸಮಿತಿ ಸಭೆಯ ಅಧ್ಯತೆ ವಹಿಸಿ ಮಾತನಾಡಿ, ಜನನ ಮತ್ತು ಮರಣ ಪ್ರಕರಣಗಳ ನೋಂದಣಿ ಪ್ರಕ್ರಿಯೆಯು ನಿಗದಿತ ತಂತ್ರಾಂಶಗಳ ಮೂಲಕ ನಡೆಯಬೇಕು. ಹಾಗೆಯೇ ಸಂಬಂಧಪಟ್ಟ ಕುಟುಂಬಸ್ಥರಿಗೆ ಪ್ರಮಾಣ ಪತ್ರಗಳನ್ನು ಸಮರ್ಪಕವಾಗಿ ವಿತರಿಸಬೇಕು. ಈ ನಿಟ್ಟಿನಲ್ಲಿ ನಗರ, ಗ್ರಾಮಾಂತರ ಪ್ರದೇಶಗಳಲ್ಲಿನ ಸ್ಥಳಿಯಾಡಳಿತ ಸಂಸ್ಥೆಗಳಲ್ಲಿನ ನೋಂದಣಿಯ ಸಮ ಅ-ಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿ, ಕಾಲ ಕಾಲಕ್ಕೆ ವರದಿ ನೀಡಬೇಕೆಂದು ಜಿಲ್ಲಾ ಸಾಂಖ್ಯಿಕ ನೋಂದಣಾಧಿಕಾರಿಗೆ ಸೂಚಿಸಿದರು.
ನೋಂದಣಿ ಮತ್ತು ಪ್ರಮಾಣ ಪತ್ರ ವಿತರಣೆಯಲ್ಲಿ ನಿಯಮ ಉಲ್ಲಂಘಿಸುವ ಯಾವುದೇ ಸ್ಥಳಿಯ ಆಡಳಿತ ಸಂಸ್ಥೆ, ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಜಿಲ್ಲಾ ಪಂಚಾಯಿತಿ ಸಿಇಒ ಪ್ರಕಾಶ್​ ಜಿ.ಟಿ.ನಿಟ್ಟಾಲಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ರಮೇಶ್​, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಹೇಶ್​ ಕುಮಾರ್​, ಜಿಲ್ಲಾ ಸಂಖ್ಯಾ ಸಂಗ್ರಹಣ ಇಲಾಖೆಯ ಸಹಾಯಕ ನಿರ್ದೇಶಕ ಸಿ.ಎಲ್​.ಶಿವಕುಮಾರ್​ ಮತ್ತಿತರರು ಇದ್ದರು.

ಸಮೀಕ್ಷಾ ಪಟ್ಟಿ ಬಿಡುಗಡೆ:
ಸಭೆಯಲ್ಲಿ 2021&22ನೇ ಸಾಲಿನ ಜಿಲ್ಲೆಯ ಅಂಕಿ ಅಂಶಗಳ ನೋಟ ಮತ್ತು ಸಾಮಾಜಿಕ ಹಾಗೂ ಆರ್ಥಿಕ ಅವಲೋಕನ ಪುಸ್ತಕ, 2022&23ನೇ ಸಾಲಿನ ಪ್ರಧಾನ ಮಂತ್ರಿ ಸಲ್​ ಬೀಮಾ ಯೋಜನೆಯ ಬೆಳೆ ಅಂದಾಜು ಸಮೀೆಯ ಕಾರ್ಯ ಯೋಜನಾ ಪಟ್ಟಿಯನ್ನು ಬಿಡುಗಡೆ ಮಾಡಿದರು.

20ಕ್ಕೆ ಅರಸು ಜಯಂತಿ:
ನಗರದ ಅಂಬೇಡ್ಕರ್​ ಭವನದಲ್ಲಿ ಆ.20ರಂದು ಬೆಳಗ್ಗೆ 10ಕ್ಕೆ ಹಿಂದುಳಿದ ವರ್ಗಗಳ ಹರಿಕಾರ ಡಿ.ದೇವರಾಜು ಅರಸು ಅವರ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಧಿಕಾರಿ ಪಿ.ಎನ್​.ರವೀಂದ್ರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಯಿತು. ವಿದ್ಯಾರ್ಥಿ ನಿಲಯಗಳ ವಿದ್ಯಾರ್ಥಿಗಳಿಗೆ ಪ್ರಬಂಧ, ಭಾಷಣ, ರಸಪ್ರಶ್ನೆ, ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಿ, ವಿಜೇತರಿಗೆ ಬಹುಮಾನ ವಿತರಣೆ, ಜಿಲ್ಲಾ ಮಟ್ಟದ ಮಾದರಿಯಲ್ಲಿ ಆಯಾ ತಾಲೂಕುಗಳಲ್ಲಿ ಕಾರ್ಯಕ್ರಮ ಆಚರಣೆ, ಎಸ್ಸೆಸ್ಸೆಲ್ಸಿ, ಪಿಯುಸಿ, ಸ್ನಾತಕೋತ್ತರ ಪದವಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ, ಡಿ.ದೇವರಾಜು ಅರಸು ಕುರಿತ ಉಪನ್ಯಾಸ ಮತ್ತು ವಿಡಿಯೋ ಕ್ಲಿಪ್​ ಪ್ರದರ್ಶನದ ಬಗ್ಗೆ ತೀರ್ಮಾನ ಕೈಗೊಳ್ಳಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net