ರೈತರ ಪಂಪ್‌ಸೆಟ್‌ಗೆ ಸಮರ್ಪಕ ವಿದ್ಯುತ್ ನೀಡಿ

11-10-Shiva-1
ರೈತರ ಪಂಪ್‌ಸೆಟ್‌ಗೆ ಸಮರ್ಪಕ ವಿದ್ಯುತ್ ಸರಬರಾಜು ಮಾಡುವಂತೆ ಒತ್ತಾಯಿಸಿ ರಾಯಚೂರಿನ ಜೆಸ್ಕಾಂ ವಿಭಾಗೀಯ ಕಚೇರಿಯಿಂದ ಮುಂದೆ ಸಿಂಗನೋಡಿ ಗ್ರಾ.ಪಂ. ವ್ಯಾಪ್ತಿಯ ರೈತರು ಬುಧವಾರ ಪ್ರತಿಭಟನೆ ನಡೆಸಿದರು. ರೈತರಾದ ಭೀಮೇಶ, ಮಲ್ಲೇಶ, ನಾಗರಾಜ, ಚಂದ್ರಶೇಖರ ಪಾಟೀಲ, ಜಾನಪ್ಪ, ಸ್ವಾಮಿ ಉರುಕುಂದ, ಶಾಂತಪ್ಪ, ಯಂಕಪ್ಪ, ನರಸಿಂಹಲು, ಬಜ್ಜಪ್ಪ, ನರಸಪ್ಪ, ಈರೇಶ ಇದ್ದರು.
Published on

ರಾಯಚೂರು: ರೈತರ ಪಂಪ್‌ಸೆಟ್‌ಗಳಿಗೆ ನಿರಂತರ 12 ಗಂಟೆಗಳ ಕಾಲ ವಿದ್ಯುತ್ ಸರಬರಾಜು ಮಾಡುವಂತೆ ಒತ್ತಾಯಿಸಿ ತಾಲೂಕಿನ ಸಿಂಗನೋಡಿ ಗ್ರಾ.ಪಂ. ವ್ಯಾಪ್ತಿಯ ರೈತರು ಜೆಸ್ಕಾಂ ವಿಭಾಗೀಯ ಕಚೇರಿಗೆ ಬುಧವಾರ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ನಂತರ ಜೆಸ್ಕಾಂ ಅೀಕ್ಷಕ ಇಂಜಿನಿಯರ್ ಚಂದ್ರಶೇಖರ ದೇಸಾಯಿಗೆ ಮನವಿ ಸಲ್ಲಿಸಿ, ಕಳೆದ ಒಂದು ವಾರದಿಂದ ವಿದ್ಯುತ್ ಕಡಿತ ಮಾಡುತ್ತಿರುವುದರಿಂದ ಬೆಳೆಗಳು ಒಣಗುತ್ತಿವೆ. ಕೂಡಲೇ ನಿಗದಿಯಂತೆ 12 ಗಂಟೆ ವಿದ್ಯುತ್ ಸರಬರಾಜು ಮಾಡಬೇಕು ಎಂದು ಆಗ್ರಹಿಸಿದರು.
ಗ್ರಾಮ ಪಂಚಾಯತಿ ವ್ಯಾಪ್ತಿಯ ಸಿಂಗನೋಡಿ ತಾಂಡಾ, ಬಾಪೂರು, ಮಂಡಲಗೇರಾ, ಬಾಪೂರು ತಾಂಡಾ, ವಡ್ಲಂದೊಡ್ಡಿ ಸೇರಿದಂತೆ ಇತರೆ ಗ್ರಾಮಗಳಲ್ಲಿ ರೈತರ ಪಂಪ್‌ಸೆಟ್‌ಗೆ ವಿದ್ಯುತ್ ಪೂರೈಕೆಯಾಗದೆ ಇರುವುದರಿಂದ ಭತ್ತ, ಮೆಣಸಿನಕಾಯಿ ಸೇರಿದಂತೆ ಇತರೆ ಬೆಳೆಗಳು ಒಣಗಿ ಹಾಳಾಗುವಂತಾಗಿದೆ.
ಈ ಹಿಂದೆ ನಿರಂತರವಾಗಿ 12 ಗಂಟೆ ವಿದ್ಯುತ್ ಸರಬರಾಜು ಮಾಡುತ್ತಿದ್ದು ಯಾವುದೇ ಸಮಸ್ಯೆ ಆಗುತ್ತಿರಲಿಲ್ಲ, ಇದೀಗ 7 ರಿಂದ 8 ಗಂಟೆ ವಿದ್ಯುತ್ ನೀಡುತ್ತಿದ್ದು, ಅದೂ ಕೂಡಾ ಸಮರ್ಪಕವಾಗಿ ಸರಬರಾಜು ಮಾಡದೇ ಇರುವುದರಿಂದ ಬೆಳೆಗೆ ನೀರು ಹರಿಸಲು ಸಾಧ್ಯವಾಗುತ್ತಿಲ್ಲ.
ಕೂಡಲೇ ನಿರಂತರ ಮೂರು ೇಸ್ ವಿದ್ಯುತ್ ಸರಬರಾಜು ಮಾಡಲು ಅಗತ್ಯ ಕ್ರಮಕೈಗೊಳ್ಳಬೇಕು. ರಾತ್ರಿ ಸಮಯದಲ್ಲಿ ವಿದ್ಯುತ್ ನೀಡುವುದನ್ನು ನಿಲ್ಲಿಸಿ ಹಗಲಿನಲ್ಲಿ ವಿದ್ಯುತ್ ಸರಬರಾಜು ಮಾಡಬೇಕು ಎಂದು ರೈತರು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ರೈತರಾದ ಭೀಮೇಶ, ಮಲ್ಲೇಶ, ನಾಗರಾಜ, ಚಂದ್ರಶೇಖರ ಪಾಟೀಲ, ಜಾನಪ್ಪ, ಸ್ವಾಮಿ ಉರುಕುಂದ, ಶಾಂತಪ್ಪ, ಯಂಕಪ್ಪ, ನರಸಿಂಹಲು, ಬಜ್ಜಪ್ಪ, ನರಸಪ್ಪ, ಈರೇಶ ಹಾಗೂ ಇನ್ನಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net