ರೈತರ ಪಂಪ್‌ಸೆಟ್‌ಗೆ ಸಮರ್ಪಕ ವಿದ್ಯುತ್ ನೀಡಿ

16-10-Shiva-3
ರೈತರ ಪಂಪ್‌ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ಸರಬರಾಜು ಮಾಡುವಂತೆ ಒತ್ತಾಯಿಸಿ ರಾಯಚೂರಿನ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ವೇಣುಗೋಪಾಲಗೆ ಭಾರತೀಯ ಕಿಸಾನ್ ಸಂಘದಿಂದ ಸೋಮವಾರ ಮನವಿ ಸಲ್ಲಿಸಲಾಯಿತು. ಸಂಘದ ಜಿಲ್ಲಾಧ್ಯಕ್ಷ ಕೆ.ರಂಗನಾಥ ನಾಯಕ, ಪದಾದಿಕಾರಿಗಳಾದ ಮಂಜುನಾಥ ದಳವಾಯಿ, ರಾಜೇಂದ್ರ ಬಾಬು, ಕಿಶನ್‌ರಾವ್ ಕುಲಕರ್ಣಿ, ಪ್ರಕಾಶ, ನೀಲಪ್ಪಗೌಡ ಇದ್ದರು.
Published on

ರಾಯಚೂರು: ರೈತರ ಪಂಪ್‌ಸೆಟ್‌ಗಳಿಗೆ ಹಗಲಿನಲ್ಲಿ 7 ಗಂಟೆ ಮತ್ತು ರಾತ್ರಿ ಸಮಯದಲ್ಲಿ 3 ಗಂಟೆ ವಿದ್ಯುತ್ ಸರಬರಾಜು ಮಾಡಬೇಕು ಎಂದು ಭಾರತೀಯ ಕಿಸಾನ್ ಸಂಘ ಒತ್ತಾಯಿಸಿದೆ.
ಸಂಘದ ನಿಯೋಗ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ವೇಣುಗೋಪಾಲಗೆ ಸೋಮವಾರ ಮನವಿ ಸಲ್ಲಿಸಿ, ಮುಂಗಾರು ವಿಲವಾಗಿ ರೈತರು ಸಂಕಷ್ಟದಲ್ಲಿದ್ದು, ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತಿರುವುದರಿಂದ ಮತ್ತಷ್ಟು ಸಮಸ್ಯೆ ಎದುರಾಗುತ್ತಿದೆ ಎಂದು ದೂರಿದರು.
ಕಾಲುವೆ ಅವಲಂಬಿತ ಜಮೀನುಗಳಿಗೆ ಸರಿಯಾಗಿ ನೀರು ಹರಿಯುತ್ತಿಲ್ಲ. ಬಿತ್ತನೆ ಮಾಡಲಾದ ಬೆಳೆಗಳು ಒಣಗುತ್ತಿವೆ. ಇಂತಹ ಸಂದರ್ಭದಲ್ಲಿ ಪಂಪ್‌ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ನೀಡದ ಕಾರಣ ರೈತರು ಮತ್ತಷ್ಟು ನಷ್ಟಕ್ಕೆ ಗುರಿಯಾಗುವಂತಾಗಿದೆ.
ಇಂಧನ ಇಲಾಖೆ ಆದೇಶದಂತೆ ಪಂಪ್‌ಸೆಟ್‌ಗೆಳಿಗೆ ಮೂರು ಪಾಳೆಯಲ್ಲಿ 5 ಗಂಟೆ ವಿದ್ಯುತ್ ಸರಬರಾಜು ಮಾಡಲು ತಕ್ಷಣ ಕ್ರಮಕೈಗೊಳ್ಳಬೇಕು. ರಾತ್ರಿ ಸಮಯದ ಬದಲು ಹಗಲಿನಲ್ಲಿ ಹೆಚ್ಚಿನ ಗಂಟೆಗಳ ಕಾಲ ವಿದ್ಯುತ್ ಸರಬರಾಜು ಮಾಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ನಿಯೋಗದಲ್ಲಿ ಸಂಘದ ಜಿಲ್ಲಾಧ್ಯಕ್ಷ ಕೆ.ರಂಗನಾಥ ನಾಯಕ, ಪದಾದಿಕಾರಿಗಳಾದ ಮಂಜುನಾಥ ದಳವಾಯಿ, ರಾಜೇಂದ್ರ ಬಾಬು, ಕಿಶನ್‌ರಾವ್ ಕುಲಕರ್ಣಿ, ಪ್ರಕಾಶ, ನೀಲಪ್ಪಗೌಡ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net