ಅಗತ್ಯ ಬೀಜ,ಗೊಬ್ಬರ ಸಮರ್ಪಕ ಪೂರೈಸಿ

Farmer, Sowing Seed, Bagalkote
ರಾಂಪುರದ ರೈತ ಸಂಪರ್ಕ ಕೇಂದ್ರದಲ್ಲಿ ಸೋಮವಾರ ಮುಂಗಾರು ಹಂಗಾಮಿಗೆ ರೈತರಿಗೆ ಬಿತ್ತನೆ ಬೀಜ ವಿತರಿಸುವ ಮೂಲಕ ಶಾಸಕ ಎಚ್.ವೈ.ಮೇಟಿ ಬೀಜ ವಿತರಣಾ ಕಾರ್ಯಕ್ಕೆ ಚಾಲನೆ ನೀಡಿದರು. ಜಿಪಂ ಮಾಜಿ ಅಧ್ಯಕ್ಷ ಬಸವಂತಪ್ಪ ಮೇಟಿ, ಸಹಾಯಕ ಕೃಷಿ ನಿರ್ದೇಶಕ ಪಾಂಡಪ್ಪ ಲಮಾಣಿ, ಕೃಷಿ ಅಧಿಕಾರಿ ಆರ್.ಜಿ.ಗೌಡರ, ಗುಂಡಪ್ಪ ಮೇಟಿ, ಬಲರಾಮ ನಾಯಕ ಇದ್ದರ
Published on

ಬಾಗಲಕೋಟೆ: ಮುಂಗಾರು ಹಂಗಾಮಿಗೆ ರೈತರಿಗೆ ಅಗತ್ಯ ಬೀಜ ಹಾಗೂ ಗೊಬ್ಬರ ದಾಸ್ತಾನು ಮಾಡಿಕೊಳ್ಳುವಂತೆ ಶಾಸಕ ಎಚ್.ವೈ.ಮೇಟಿ ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ತಾಲೂಕಿನ ರಾಂಪುರ ರೈತ ಸಂಪರ್ಕ ಕೇಂದ್ರದಲ್ಲಿ ಸೋಮವಾರ ಮುಂಗಾರು ಹಂಗಾಮಿಗೆ ರೈತರಿಗೆ ರಿಯಾಯಿತಿ ದರದಲ್ಲಿ ನೀಡಲಾಗುವ ಬೀಜಗಳ ವಿತರಣೆ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿ, ರೈತರಿಗೆ ಬೀಜ ಹಾಗೂ ಗೊಬ್ಬರದ ಕೊರತೆ ಆಗದಂತೆ ನೋಡಿಕೊಳ್ಳಬೇಕು ಎಂದರು.

ಸರ್ಕಾರದ ರಿಯಾಯಿತಿ ದರದ ಬೀಜ, ಗೊಬ್ಬರ ಹಾಗೂ ಕೃಷಿ ಸಲಕರಣೆಗಳನ್ನು ರೈತರು ಪಡೆದುಕೊಂಡು ಉತ್ತಮ ಕೃಷಿ ಕೈಗೊಳ್ಳಬೇಕು. ಮುಂಗಾರು ಹಂಗಾಮಿಗೆ ಹೆಸರು, ತೊಗರಿ ಬೀಜಗಳನ್ನು ರೈತರ ಬೇಡಿಕೆಗೆ ಅನುಗುಣವಾಗಿ ವಿತರಿಸಬೇಕು ಎಂದರು.

ಉಪ ಕೃಷಿ ನಿರ್ದೇಶಕ ಎಚ್.ಪಿ.ಕೋಳೆಕರ ಮಾತನಾಡಿ, ಮುಂಗಾರು ಹಂಗಾಮಿನಲ್ಲಿ ರೈತರಿಗೆ ಅಗತ್ಯವಾಗಿರುವ ಹೆಸರು, ತೊಗರಿ, ಸೂರ್ಯಕಾಂತಿ, ಸಜ್ಜೆ ಮತ್ತಿತರ ಬೀಜಗಳನ್ನು ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಮಾಡುವುದಾಗಿ ಭರವಸೆ ನೀಡಿದರಲ್ಲದೆ, ಎಲ್ಲ ಬೀಜಗಳನ್ನು ಕ್ಯೂಆರ್ ಕೋಡ್ ಸ್ಕಾೃನ್ ಮುಖಾಂತರ ರಿಯಾಯಿತಿ ದರದಲ್ಲಿ ಕೊಡಲಾಗುವುದು ಎಂದು ತಿಳಿಸಿದರು.

ಶಾಸಕ ಎಚ್.ವೈ.ಮೇಟಿ ಅವರು ಇದೇ ಸಂದರ್ಭದಲ್ಲಿ ಲಾನುಭವಿ ರೈತರಿಗೆ ಕೃಷಿ ಸಲಕರಣೆಗಳನ್ನು ವಿತರಿಸಿದರಲ್ಲದೆ, ರೈತ ಸಂಪರ್ಕ ಕೇಂದ್ರದ ಆವರಣದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಸಸಿ ನೆಟ್ಟು ನೀರುಣಿಸಿದರು. ಜಿಪಂ ಮಾಜಿ ಅಧ್ಯಕ್ಷ ಬಸವಂತಪ್ಪ ಮೇಟಿ, ಸಹಾಯಕ ಕೃಷಿ ನಿರ್ದೇಶಕ ಪಾಂಡಪ್ಪ ಲಮಾಣಿ, ಕೃಷಿ ಅಧಿಕಾರಿ ಆರ್.ಜಿ.ಗೌಡರ, ಗುಂಡಪ್ಪ ಮೇಟಿ, ಬಲರಾಮ ನಾಯಕ, ಮುದಕಪ್ಪ ಕೊಣ್ಣೂರ, ಶಿವಪ್ಪ ನುಗ್ಲಿ, ಶ್ರೀಕರ ದೇಸಾಯಿ, ಸಂಗಮೇಶ ಕೆಂಜೋಡಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net