ನಷ್ಟಕ್ಕೊಳಗಾದ ರೈತರಿಗೆ ಸೂಕ್ತ ಪರಿಹಾರ ನೀಡಿ

Published on

ಗಂಗಾವತಿ: ಬೆಳೆ ನಷ್ಟಕ್ಕೊಳಗಾದ ರೈತರಿಗೆ ಸೂಕ್ತ ಪರಿಹಾರದ ಜತೆಗೆ ಸಾಲಮನ್ನಾ ಮಾಡುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕು ಸಮಿತಿ ಸದಸ್ಯರು ನಗರದ ಶ್ರೀಕೃಷ್ಣದೇವರಾಯ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಿ ಶಿರಸ್ತೇದಾರ್ ಸುನೀಲ್ ಕುಲ್ಕರ್ಣಿಗೆ ಮನವಿ ಸಲ್ಲಿಸಿದರು.

ತಾಲೂಕಾಧ್ಯಕ್ಷ ಶ್ರೀನಿವಾಸ ಹೊಸಳ್ಳಿ ಮಾತನಾಡಿ, ಹವಾಮಾನ ವೈಪರಿತ್ಯದಿಂದ ತ್ರಿವಳಿ ತಾಲೂಕಿನಲ್ಲಿ ಭತ್ತದ ಬೆಳೆ ಹಾನಿಯಾಗಿದ್ದು, ಮಳೆಯಾಶ್ರಿತ ಎಣ್ಣೆಕಾಳು ಮತ್ತು ದ್ವಿದಳ ಧಾನ್ಯಗಳ ಬೆಳೆಗಳ ಮೇಲೆ ಪರಿಣಾಮ ಬೀರಿದೆ. ಇಳುವರಿ ಬರುವ ಸಮಯದಲ್ಲಿ ಬೆಳೆಹಾನಿಯಾಗಿದ್ದು, ರೈತರು ಸಂಕಷ್ಟಕ್ಕೊಳಗಾಗಿದ್ದಾರೆ. ಕೃಷಿಯನ್ನು ನಂಬಿ ಸಾಲ ಮಾಡಿದವರ ಪರಿಸ್ಥಿತಿ ಗಂಭೀರವಾಗಿದ್ದು, ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿ ಬಂದಿದೆ. ಭತ್ತದ ಬೆಳೆದ ರೈತರಿಗೆ ಎಕರೆಗೆ 40 ಸಾವಿರ ರೂ. ಮತ್ತು ಮಳೆಯಾಶ್ರಿತ ಎಣ್ಣೆಕಾಳು ಮತ್ತು ದ್ವಿದಳ ಧಾನ್ಯ ಬೆಳೆದ ರೈತರಿಗೆ ಎಕರೆಗೆ 30 ಸಾವಿರ ರೂ. ಪರಿಹಾರ ನೀಡಬೇಕು. ಕೃಷಿ ಮತ್ತು ಕಂದಾಯ ಅಧಿಕಾರಿಗಳ ತಂಡ ಕೂಡಲೇ ಸಮೀಕ್ಷೆ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಸಿಐಟಿಯು ಜಿಲ್ಲಾ ಕಾರ್ಯದರ್ಶಿ ನಿರುಪಾದಿ ಬೆಣಕಲ್, ವಿವಿಧ ಸಂಘಟನೆ ಪದಾಧಿಕಾರಿಗಳಾದ ಮಂಜುನಾಥ ಡಗ್ಗಿ, ಮರಿನಾಗಪ್ಪ, ವಿರುಪಣ್ಣ, ಮುತ್ತಣ್ಣ ದಾಸನಾಳ, ಎಸ್.ಕೆ.ಕನಕರಾಯ, ಪಂಪಾಪತಿ ಜಂತಕಲ್, ವಿರುಪಣ್ಣ ಮೋಟಿ ಹೊಸಳ್ಳಿ, ಹನುಮಂತ ಹೆಬ್ಬಾಳ, ಗಾದೆಪ್ಪ, ಹನುಮೇಶ ಬೆಣಕಲ್, ಚಾಂದಬೀ, ಯಮನೂರ್‌ಸಾಬ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net