ರೈತರಿಗೆ ಸೂಕ್ತ ಪರಿಹಾರ ಕಲ್ಪಿಸಲಿ

Itagi
Published on

ಮುಂಡರಗಿ: ಗದಗ ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ಸೂಕ್ತ ಪರಿಹಾರ ಕಲ್ಪಿಸಬೇಕು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶಿವಾನಂದ ಇಟಗಿ ಒತ್ತಾಯಿಸಿದರು.

ಪಟ್ಟಣದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಳೆ ಇಲ್ಲದೆ ರೈತರು ಸಂಕಷ್ಟದಲ್ಲಿದ್ದಾರೆ. ಬರಪೀಡಿತ ಪ್ರದೇಶವೆಂದು ಘೋಷಣೆಯಾದರೆ ಸರ್ಕಾರದಿಂದ ಪರಿಹಾರ ದೊರೆಯಲಿದೆ. ಹಾಗೆಯೇ ಕೆಲವೊಂದು ಬೆಳೆಗೆ ಮಾತ್ರ ವಿಮೆ ನೀಡಲಾಗುತ್ತದೆ. ಬರ ಆವರಿಸಿರುವುದರಿಂದ ಎಲ್ಲ ಬೆಳೆಗಳಿಗೂ ಬೆಳೆ ವಿಮೆ ಪರಿಹಾರ ನೀಡಬೇಕು. ಪಂಪ್‌ಸೆಟ್ ಮೀಟರ್‌ಗೆ ರೈತನ ಆಧಾರ್ ಕಾರ್ಡ್ ನಂಬರ್ ಲಿಂಕ್ ಮಾಡುವ ಪ್ರಕ್ರಿಯೆ ಕೈಬಿಡಬೇಕು. ಗೋವಿನಜೋಳ ಖರೀದಿ ಕೇಂದ್ರ ಆರಂಭಿಸಬೇಕು. ಈ ಎಲ್ಲ ಬೇಡಿಕೆಗಳನ್ನು ಈಡೇರಿಸದಿದ್ದರೆ ಸೆ. 4ರಂದು ತಹಸೀಲ್ದಾರ್ ಕಚೇರಿಯ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ರೈತರಾದ ಚಂದ್ರಕಾಂತ ಉಳ್ಳಾಗಡ್ಡಿ, ಶರಣಪ್ಪ ಕಂಬಳಿ, ಎಚ್.ಬಿ. ಕುರಿ, ತಿಮ್ಮಪ್ಪ ಉಪ್ಪಾರ, ಶ್ರೀಕಾಂತಗೌಡ ಪಾಟೀಲ, ಮಂಜಪ್ಪ ಹುಯಿಲಗೋಳ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net