ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ರೈತರಿಗೆ ಒದಗಿಸಿ

27 HANUR 3
ಮಹಾಲಿಂಗನಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು. ಶಾಸಕ ಎಂ.ಆರ್. ಮಂಜುನಾಥ್, ಶ್ರೀ ಬಸವಣ್ಣ ಸ್ವಾಮೀಜಿ, ಉದ್ದನೂರು ಪ್ರಸಾದ್, ಶಿವಮೂರ್ತಿ ಇತರರಿದ್ದರು.
Published on

ಹನೂರು: ರೈತರಿಗೆ ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ಒದಗಿಸಿ ಕೊಡುವುದರ ಜತೆಗೆ ಸಂಘದ ಅಭಿವೃದ್ಧಿ ಪ್ರತಿಯೊಬ್ಬರೂ ಸಹಕಾರ ನೀಡಬೇಕು ಎಂದು ಶಾಸಕ ಎಂ.ಆರ್.ಮಂಜುನಾಥ್ ತಿಳಿಸಿದರು.

ತಾಲೂಕಿನ ಮಹಾಲಿಂಗನಕಟ್ಟೆ ಗ್ರಾಮದಲ್ಲಿ ಶನಿವಾರ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಆಯೋಜಿಸಿದ್ದ ನೂತನ ಪದಾಧಿಕಾರಿಗಳ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಈ ಭಾಗದಲ್ಲಿ ಹೆಚ್ಚಿನ ರೈತರು ಕೃಷಿಯ ಜತೆಗೆ ಹೈನುಗಾರಿಕೆಯನ್ನು ಅವಲಂಬಿಸಿದ್ದಾರೆ. ಇದರಿಂದ ಹಾಲು ಸಂಗ್ರಹಣೆ ಪ್ರಮಾಣ ಹೆಚ್ಚುತ್ತಿದ್ದು, ಸಂಘದ ಅಭಿವೃದ್ಧಿಗೆ ಸಹಕಾರ ನೀಡುತ್ತಿದ್ದಾರೆ. ಹಾಗಾಗಿ ರೈತರ ಶ್ರೇಯೋಭಿವೃದ್ಧಿಯನ್ನು ಕಾಪಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಆದ್ದರಿಂದ ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ಒದಗಿಸಿಕೊಡಬೇಕು. ಇದಕ್ಕೆ ಸಂಪೂರ್ಣ ಸಹಕಾರ ನೀಡಲಾಗುವುದು. ಜತೆಗೆ ಕುಡಿಯುವ ನೀರು, ರಸ್ತೆ, ಸಮುದಾಯ ಭವನ ಸೇರಿದಂತೆ ಇನ್ನಿತರ ಅಗತ್ಯ ಮೂಲ ಸೌಕರ್ಯವನ್ನು ಒದಗಿಸಿ ಕೊಡುವುದರ ಮೂಲಕ ಗ್ರಾಮದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸಲಾಗುವುದು ಎಂದು ತಿಳಿಸಿದರು.

ಇದಕ್ಕೂ ಮುನ್ನ ಸಂಘದ ಅಧ್ಯಕ್ಷ ಕುಮಾರ್, ಉಪಾಧ್ಯಕ್ಷ ರುದ್ರಸ್ವಾಮಿ, ನಿರ್ದೇಶಕರಾದ ರುದ್ರಣ್ಣ, ಶಿವನಪ್ಪ, ಪ್ರಭುಸ್ವಾಮಿ, ಮಹಾದೇವಪ್ರಭು, ದೀಪಕ್, ಶೈಲಜಾ ಹಾಗೂ ರಾಜಮ್ಮ ಅವರನ್ನು ಸನ್ಮಾನಿಸಲಾಯಿತು.

ಶ್ರೀ ಬಸವಣ್ಣ ಸ್ವಾಮೀಜಿ, ಚಾಮುಲ್ ನಿರ್ದೇಶಕ ಉದ್ದನೂರು ಪ್ರಸಾದ್, ಜಿಪಂ ಮಾಜಿ ಉಪಾಧ್ಯಕ್ಷ ಶಿವಮೂರ್ತಿ, ಗ್ರಾಪಂ ಸದಸ್ಯರಾದ ಜಡೇಸ್ವಾಮಿ, ಮಲ್ಲೇಶ್, ಮುಖಂಡರಾದ ಗಿರೀಶ್, ಗೋಪಾಲ್, ಪ್ರಮೋದ್, ವಿಜಯಕುಮಾರ್, ಪ್ರಸನ್ನ ಹಾಗೂ ಇನ್ನಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net