ರೈತರಿಗೆ ಉತ್ತಮ ಸೌಲಭ್ಯ ಕಲ್ಪಿಸಿ

6ldh3
Published on

ಲಿಂಗದಹಳ್ಳಿ: ತರೀಕೆರೆ ತಾಲೂಕಿನ ಪ್ರಾಥಮಿಕ ಕೃಷಿ ಭೂ ಅಭಿವೃದ್ಧಿ ಬ್ಯಾಂಕ್‌ನ ನಿರ್ದೇಶಕರಾಗಿ ಅವಿರೋಧ ಆಯ್ಕೆಯಾಗಿರುವ ತಮ್ಮಯ್ಯ ಹೋಬಳಿ ರೈತರಿಗೆ ಬ್ಯಾಂಕ್‌ನಿಂದ ಸಿಗುವ ಸೌಲಭ್ಯಗಳನ್ನು ಕಲ್ಪಿಸಿ ಕೊಡುವ ಮೂಲಕ ರೈತರ ಅಭಿವೃದ್ಧಿಗೆ ಮುಂದಾಗ ಬೇಕು ಎಂದು ಶಾಸಕ ಜಿ.ಹೆಚ್.ಶ್ರೀನಿವಾಸ್ ಹೇಳಿದರು.

ಲಿಂಗದಹಳ್ಳಿಯಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿ, ನನ್ನ ಅಧಿಕಾರದ ಅವಧಿಯಲ್ಲಿ ಲಿಂಗದಹಳ್ಳಿ ಹೋಬಳಿಯ ಅಭಿವೃದ್ದಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದರು. ಪಿಎಲ್‌ಡಿ ಬ್ಯಾಂಕ್‌ನ ನಿರ್ದೇಶಕ ಉಡೇವಾ ತಮ್ಮಯ್ಯ ಮಾತನಾಡಿ, ಶಾಸಕರಾದ ಆಶಯದಂತೆ ರೈತರ ಸರ್ವೋತೋಮುಖ ಅಭಿವೃದ್ಧಿಗಾಗಿ ಕಾರ್ಯನಿರ್ವಹಿಸಲಾಗುವುದು ಎಂದು ಹೇಳಿದರು. ಲಿಂಗದಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಎಲ್.ಎನ್.ಲಿಂಗರಾಜು ಶಿಕ್ಷಕರಾದ ನಾಗೇಶಪ್ಪ, ವಿವಿಧ ಗ್ರಾಮಗಳ ಮುಖಂಡರುಗಳು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net