ಸಾರ್ವಜನಿಕರಿಗೆ ಶುದ್ಧ ಕುಡಿವ ನೀರು ಪೂರೈಸಿ

Untitled design (3)
ಯಲಬುರ್ಗಾ ತಾಲೂಕಿನ ಕಟಗಿಹಳ್ಳಿ ಗ್ರಾಮಕ್ಕೆ ಆರ್‌ಡಿಪಿಆರ್ ಇಲಾಖೆ ಪ್ರಧಾನ ಕಾರ್ಯದರ್ಶಿ ಅಂಜುಮ್ ಪರ್ವೇಜ್ ಭೇಟಿ ನೀಡಿದರು. ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆಯ, ಉಪ ಕಾರ್ಯದರ್ಶಿ ಮಲ್ಲಪ್ಪ ತೊದಲಬಾಗಿ, ತಾಪಂ ಇಒ ಸಂತೋಷ ಪಾಟೀಲ್, ಗಾಣಧಾಳ ಗ್ರಾಪಂ ಉಪಾಧ್ಯಕ್ಷ ಬಸವರಾಜ ಬಂಗಾರಿ, ಸದಸ್ಯ ಓಮಣ್ಣ ಚನ್ನದಾಸರ್ ಇದ್ದರು.
Published on

ಯಲಬುರ್ಗಾ: ವಿವಿಧ ಗ್ರಾಮಗಳಲ್ಲಿ ಬಾಕಿ ಇರುವ ಜೆಜೆಎಂ ಕಾಮಗಾರಿ ಪೂರ್ಣಗೊಳಿಸಿ ಗ್ರಾಪಂಗೆ ಹಸ್ತಾಂತರಿಸಬೇಕು ಎಂದು ಆರ್‌ಡಿಪಿಆರ್ ಇಲಾಖೆ ಪ್ರಧಾನ ಕಾರ್ಯದರ್ಶಿ ಅಂಜುಮ್ ಪರ್ವೇಜ್ ಹೇಳಿದರು.


ತಾಲೂಕಿನ ಕಟಗಿಹಳ್ಳಿ, ತಿಪ್ಪನಾಳ, ಮುರಡಿ ಗ್ರಾಮಕ್ಕೆ ಗುರುವಾರ ಭೇಟಿ ನೀಡಿ ಜೆಜೆಎಂ ಕಾಮಗಾರಿ ಪರಿಶೀಲಿಸಿ ಮಾತನಾಡಿದರು ಗ್ರಾಮಸ್ಥರು ಶುದ್ಧ ಕುಡಿವ ನೀರು ಪೂರೈಸಬೇಕು. ಅಧಿಕಾರಿಗಳು ಗ್ರಾಪಂ ವ್ಯಾಪ್ತಿಯ ಎಲ್ಲ ಹಳ್ಳಿಗಳಲ್ಲಿ ವೈಯಕ್ತಿಕ ಶೌಚಗೃಹ ನಿರ್ಮಾಣ, ನೈರ್ಮಲ್ಯಕ್ಕೆ ಆದ್ಯತೆ ನೀಡಬೇಕು. ಸ್ವಚ್ಛತೆ ಬಗ್ಗೆ ಕಾಳಜಿ ವಹಿಸಬೇಕು ಎಂದರು.


ಶೌಚಗೃಹ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಿ: ನಿಮ್ಮ ಮನೆಗಳಲ್ಲಿ ವೈಯಕ್ತಿಕ ಶೌಚಗೃಹ ಬಳಕೆ ಮಾಡುತ್ತೀರಾ ಎಂದು ಕಾಮಗಾರಿ ಪರಿಶೀಲನೆ ವೇಳೆ ಪ್ರಧಾನ ಕಾರ್ಯದರ್ಶಿ ಅಂಜುಮ್ ಪರ್ವೇಜ್ ಸ್ಥಳದಲ್ಲಿದ್ದ ಮಕ್ಕಳನ್ನು ಪ್ರಶ್ನಿಸಿದರು. ಅದಕ್ಕೆ ಮಕ್ಕಳು ನಾವು ಬಯಲು ಶೌಚಕ್ಕೆ ಹೋಗುತ್ತೇವೆ ಎಂದು ಉತ್ತರಿಸಿದರು. ಬಳಿಕ ಮಾತನಾಡಿ, ಪ್ರತಿ ಮನೆಗೂ ವೈಯಕ್ತಿಕ ಶೌಚಗೃಹ ನಿರ್ಮಾಣಕ್ಕೆ ಕೂಡಲೇ ಕ್ರಮವಹಿಸಬೇಕು. ಸ್ವಚ್ಛತೆ ಬಗ್ಗೆ ಕಾಳಜಿ ವಹಿಸಬೇಕು ಎಂದು ಗ್ರಾಪಂ ಅಧಿಕಾರಿಗಳಿಗೆ ಸೂಚನೆ ನೀಡಿದರು.


ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆಯ, ಉಪ ಕಾರ್ಯದರ್ಶಿ ಮಲ್ಲಪ್ಪ ತೊದಲಬಾಗಿ, ತಾಪಂ ಇಒ ಸಂತೋಷ ಪಾಟೀಲ್, ಆರ್‌ಡಬ್ಯುಎಸ್ ಎಇಇ ರಿಜ್ವಾನಾ ಬೇಗಂ, ಗಾಣಧಾಳ ಗ್ರಾಪಂ ಉಪಾಧ್ಯಕ್ಷ ಬಸವರಾಜ ಬಂಗಾರಿ, ಸದಸ್ಯ ಓಮಣ್ಣ ಚನ್ನದಾಸರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net