

ಬಸವನಬಾಗೇವಾಡಿ : ಸರ್ಕಾರಿ ಆದರ್ಶ ವಿದ್ಯಾಲಯ ಶಾಲೆಗೆ ಕುಡಿಯುವ ನೀರು ಸೇರಿ ಮೂಲ ಸೌಲಭ್ಯ ಕಲ್ಪಿಸಬೇಕು ಎಂದು ಎಸ್ಡಿಎಂಸಿ ಅಧ್ಯ ಆನಂದ ಸಜ್ಜನ ಒತ್ತಾಯಿಸಿದ್ದಾರೆ.
ಸಮಿತಿ ಅಧ್ಯರು, ಉಪಾಧ್ಯರು ಹಾಗೂ ಸದಸ್ಯರು ಪಟ್ಟಣದ ತಾ.ಪಂ.ಇ.ಒ, ತಹಸೀಲ್ದಾರ್ಗೆ ಶುಕ್ರವಾರ ಮನವಿ ಸಲ್ಲಿಸಿ, ಸಮಸ್ಯೆಗೆ ಸ್ಪಂದಿಸದಿದ್ದರೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಪಾಲಕರೊಂದಿಗೆ ಧರಣಿ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ರ್ನಿಲಕ್ಷ$್ಯದಿಂದ ಒಂದು ವಾರದಿಂದ ಮಕ್ಕಳಿಗೆ ಕುಡಿಯಲು ನೀರು ಸಿಗುತ್ತಿಲ್ಲ. ಈ ಕುರಿತು ಸಂಬಂಧಿತರಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂದು ಅವರು ದೂರಿದ್ದಾರೆ.
ಈ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಸುಮಾರು 800ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕುಡಿಯುವ ನೀರಿಗಾಗಿ ಪರದಾಡುತ್ತಿದ್ದಾರೆೆ ಎಂದರು.
ಎಸ್.ಡಿ.ಎಂ.ಸಿ. ಸದಸ್ಯರಾದ ಪ್ರಕಾಶ ಬೆಣ್ಣೂರ. ಶಿವಾನಂದ ಮಡಿಕೇಶ್ವರ, ರಮೇಶ ಮೊಕಾಶಿ, ಸತೀಶ ಬಿರಾದಾರ, ಪುಡಲಿಂಕ ಪವಾರ, ವೈಷ್ಣವಿ ಕುಲಕರ್ಣಿ, ರೇಣುಕಾ ಮನಹಳ್ಳಿ ಉಪಸ್ಥಿತರಿದ್ದರು.