

ವಿಜಯಪುರ: ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಜಿಲ್ಲಾ ಕೌಶಲ್ಯ ಮಿಷನ್ ಸಮಿತಿ ಪ್ರಗತಿ ಪರಿಶೀಲನಾ ಸಭೆಯು ನಡೆಯಿತು.
ಸಭೆಯಲ್ಲಿ ಡೇ&ನಲ್ಮ ಯೋಜನೆಯ ಎಲ್ಲ ಉಪಟಕಗಳ ಪ್ರಗತಿ ಪರಿಶೀಲನೆ ನಡೆಸಲಾಗಿದ್ದು, ಪಿಎಂ ಸ್ವನಿಧಿ, ಸ್ವ&ನಿಧಿ ಸೇ ಸಮೃದ್ಧಿ ಯೋಜನೆಯಡಿ 8 ಸಾಮಾಜಿಕ ಭದ್ರತಾ ಯೋಜನೆಗಳ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ಒದಗಿಸಲು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅಮೃತ 2.0 ಯೋಜನೆಯ ಅಮೃತ್ ಮಿತ್ರ ಕಾರ್ಯಕ್ರಮದಡಿ ಟೆಂಡರ್ ಪ್ರಕ್ರಿಯೆ ಮುಕ್ತಾಯವಾಗಿದ್ದು, ಅರ್ಹತೆ ಪಡೆದ ಮಹಿಳಾ ಸ್ವಸಹಾಯ ಸಂಗಳಿಗೆ ಕಾಮಗಾರಿ ಆದೇಶ ನೀಡಲು ಕ್ರಮ ವಹಿಸುವಂತೆ ನಗರ ಸ್ಥಳಿಯ ಸಂಸ್ಥೆಗಳ ಮುಖ್ಯಾಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜನೆಗೆ ಸೂಕ್ತ ಸ್ಥಳ ಗುರುತಿಸುವುದು ಸೇರಿದಂತೆ ಉದ್ಯೋಗಾಕಾಂಗಳು ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗ ಮೇಳದಲ್ಲಿ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳಲು ಸೂಕ್ತ ಪ್ರಚಾರ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಲಾಯಿತು.
ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಿ.ಎ. ಸೌದಾಗರ, ಡಿಸ್ಟ್ರಿಕ್ ಇಂಡಸ್ಟ್ರಿಯಲ್ ಓನರ್ ಅಸೋಸಿಯೇಶನ್ ಅಧ್ಯಕ್ಷ ಎಸ್.ವಿ. ಪಾಟೀಲ, ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಸಿ.ಬಿ. ಕುಂಬಾರ ಮತ್ತಿತರರಿದ್ದರು.