ಕಾರ್ಮಿಕರಿಗೆ ಸೌಲಭ್ಯ ಕಲ್ಪಿಸಿ

Published on

ಸಿರಿಗೇರಿ: ಸಮೀಪದ ಮುದ್ದಟನೂರು ಗ್ರಾಪಂ ವ್ಯಾಪ್ತಿಯಲ್ಲಿ ನರೇಗಾ ಕಾರ್ಮಿಕರಿಗೆ ಅಗತ್ಯ ಸೌಲಭ್ಯ ಒದಗಿಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಆರೋಪಿಸಿ ಕಾರ್ಮಿಕರು ಬುಧವಾರ ಪ್ರತಿಭಟನೆ ನಡೆಸಿದರು. ಮಾಳಾಪುರ ಕೆರೆ ಕಾಮಗಾರಿ ಸ್ಥಳದಲ್ಲಿ ಯಾವುದೇ ಸೌಲಭ್ಯ ಒದಗಿಸದೆ ನಿರ್ಲಕ್ಷೃ ತೋರಿದ್ದಾರೆ. ಶುದ್ಧ ಕುಡಿಯುವ ನೀರು, ನೆರಳಿನ ವ್ಯವಸ್ಥೆ, ಪ್ರಥಮ ಚಿಕಿತ್ಸೆ ವ್ಯವಸ್ಥೆ ಮಾಡಬೇಕು. ಬೇಸಿಗೆ ತಾಪಮಾನಕ್ಕೆ ನೆರಳಿಲ್ಲದೆ ಕುಳಿತುಕೊಳ್ಳವುದು ಕಷ್ಟವಾಗಿದೆ. ಗ್ರಾಪಂ ಅಧಿಕಾರಿಗಳು ಯಾವುದೇ ಸೌಲಭ್ಯ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪಿಡಿಒ ಬಸವರಾಜ ಮಾತನಾಡಿ, ನರೇಗಾ ಮೇಟಿಗಳಿಗೆ ಕೂಡಲೇ ನೀರಿನ ವ್ಯವಸ್ಥೆ ಕಲ್ಪಿಸಲು ತಿಳಿಸಲಾಗಿದೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net