ಬಿಎಸ್‌ಎನ್‌ಎಲ್ ಗ್ರಾಹಕರಿಗೆ ತ್ವರಿತವಾಗಿ ಸೇವೆ ಒದಗಿಸಿ

Prathap Simha
Published on

ಬಿಎಸ್‌ಎನ್‌ಎಲ್ ಉಳಿಯಬೇಕಾದರೆ ಜಿಯೋ, ಏರ್‌ಟೆಲ್‌ನಂಥ ದೈತ್ಯ ಟೆಲಿಕಾಂ ಕಂಪನಿಗಳಿಗೆ ಸ್ಪರ್ಧೆ ನೀಡುವ ಮಟ್ಟಕ್ಕೆ ತನ್ನ ಸೇವೆಗಳನ್ನು ತ್ವರಿತವಾಗಿ ಗ್ರಾಹಕರಿಗೆ ಒದಗಿಸಲು ಕಾರ್ಯಪ್ರವೃತ್ತವಾಗಬೇಕಿದೆ ಎಂದು ಸಂಸದ ಪ್ರತಾಪ್ ಸಿಂಹ ಸಲಹೆ ನೀಡಿದರು.

ನಗರದ ಭಾರತ ಸಂಚಾರ ನಿಗಮ ಲಿಮಿಟೆಡ್ (ಬಿಎಸ್‌ಎನ್‌ಎಲ್) ಪ್ರಾದೇಶಿಕ ತರಬೇತಿ ಕೇಂದ್ರದಲ್ಲಿ ಸೋಮವಾರ ಆಯೋಜಿಸಿದ್ದ ಸಲಹಾ ಮಂಡಳಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಬಿಎಸ್‌ಎನ್‌ಎಲ್ ಇಂದಿನ ಕಾಲಕ್ಕೆ ಅನುಗುಣವಾಗಿ ಸೂಪರ್ ಾಸ್ಟ್ ನೆಟ್‌ವರ್ಕ್ ಸೇರಿದಂತೆ ಇತರ ಸೇವೆಗಳನ್ನು ಮೇಲ್ದರ್ಜೆಗೆ ಏರಿಕೆ ಮಾಡಬೇಕಾದ ಅನಿವಾರ್ಯ ಇದೆ ಎಂದು ಸಲಹೆ ನೀಡಿದರು.

ಬಿಎಸ್‌ಎನ್‌ಎಲ್‌ನಿಂದ ಸಮರ್ಪಕ ಸೇವೆಗಳು ದೊರೆಯುತ್ತಿಲ್ಲ ಎಂದು ಗ್ರಾಹಕರು ದೂರುತ್ತಿದ್ದಾರೆ. ಇದರಿಂದಾಗಿ ಹೆಚ್ಚಿನ ಗ್ರಾಹಕರು ಜಿಯೋ, ಏರ್‌ಟೆಲ್, ಐಡಿಯಾದಂಥ ಸೂಪರ್ ಾಸ್ಟ್ ನೆಟ್‌ವರ್ಕ್ ಸೇವೆಗಳ ಕಡೆ ಮುಖ ಮಾಡುತಿದ್ದಾರೆ. ಆದ್ದರಿಂದ ಬಿಎಸ್‌ಎನ್‌ಎಲ್ ಕೂಡ ಇಂದಿನ ಕಾಲಕ್ಕೆ ಅನುಗುಣಕ್ಕೆ ಬದಲಾಗಬೇಕಿದೆ ಎಂದು ಸಲಹೆ ನೀಡಿದರು.

ಚಾಮರಾಜನಗರ, ಕೊಡಗು, ಎಚ್.ಡಿ ಕೋಟೆಯಂಥ ಹಿಂದುಳಿದ ತಾಲೂಕುಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಟವರ್ ಕಂಬಗಳನ್ನು ಸ್ಥಾಪಿಸಬೇಕು. ಮೈಸೂರು ಸುತ್ತಮುತ್ತಲಿನ ಪ್ರದೇಶದಲ್ಲಿ ನೆಟ್‌ವರ್ಕ್ ಸಮಸ್ಯೆ ಅಷ್ಟೇನೂ ಇಲ್ಲದಿರುವುದರಿಂದ ಹಿಂದುಳಿದ ತಾಲೂಕುಗಳ ಕಡೆ ಅಧಿಕಾರಿಗಳು ಹೆಚ್ಚು ಗಮನ ಹರಿಸಿದರೆ, ಮತ್ತಷ್ಟು ಗ್ರಾಹಕರು ಸಿಗುತ್ತಾರೆ. ಇದರಿಂದ ಸಂಸ್ಥೆಗೆ ಹೆಚ್ಚು ವರಮಾನವೂ ಬರುತ್ತದೆ ಎಂದು ಹೇಳಿದರು.


ಕೇಂದ್ರ ಸರ್ಕಾರ ಭಾರತ್ ನೆಟ್ ನೆಟ್‌ವರ್ಕ್ ಯೋಜನೆಯಡಿ ಸರ್ಕಾರಿ ಶಾಲೆ, ಪ್ರಾಥಮಿಕ ಆರೋಗ್ಯ ಕೇಂದ್ರ, ನ್ಯಾಯಬೆಲೆ ಅಂಗಡಿಗಳಿಗೆ ನೀಡುತ್ತಿದ್ದ ಇಂಟರ್‌ನೆಟ್ ಸೌಲಭ್ಯಕ್ಕೆ ಕಾಂಗ್ರೆಸ್ ಸರ್ಕಾರ ತಡೆ ನೀಡಿದೆ. ಇದರಿಂದ ಸಾಕಷ್ಟು ಜನರು ಇಂಟರ್‌ನೆಟ್ ಸೌಲಭ್ಯದಿಂದ ವಂಚಿತರಾಗಿದ್ದಾರೆ ಎಂದು ದೂರಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net