ಕಲಾವಿದರಿಗೆ ಆರ್ಥಿಕ ನೆರವು ನೀಡಿ

JLY., 16, HNP., PH.1.
Published on

ಹೊಳೆನರಸೀಪುರ: ಕರೊನಾ ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿರುವ ಕಲಾವಿದರಿಗೆ ಸರ್ಕಾರ ಆರ್ಥಿಕ ನೆರವು ನೀಡಬೇಕೆಂದು ಅಖಿಲ ಕರ್ನಾಟಕ ಲಘು ಸಂಗೀತ ಹಾಗೂ ಸಾಂಸ್ಕೃತಿಕ ಕಲಾವಿದರ ಸಂಘದ ತಾಲೂಕು ಘಟಕ ಮನವಿ ಮಾಡಿದೆ.

ಈ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಿಗೆ ಬರೆದಿರುವ ಮನವಿ ಪತ್ರವನ್ನು ಸಂಘದ ಅಧ್ಯಕ್ಷ ವೈ.ಜೆ.ಅಜಿತ್‌ಕುಮಾರ್ ನೇತೃತ್ವದಲ್ಲಿ ತಹಸೀಲ್ದಾರ್ ಕೆ.ಆರ್.ಶ್ರೀನಿವಾಸ್ ಅವರಿಗೆ ತಾಲೂಕು ಕಚೇರಿಯಲ್ಲಿ ಗುರುವಾರ ಸಲ್ಲಿಸಿದರು.

ಲಾಕ್‌ಡೌನ್‌ನಿಂದ ಬಡವರು, ಕೂಲಿ ಕಾರ್ಮಿಕರು, ಗಾಯಕರು, ಕಲಾವಿದರು, ಧ್ವನಿವರ್ದಕದವರು, ವಿದ್ಯುತ್ ದೀಪಾಲಂಕಾರ ವೃತ್ತಿ ನಂಬಿರುವವರ ಬದುಕು ಅತಂತ್ರವಾಗಿದೆ. ಸರ್ಕಾರ ಕೂಡಲೇ ಇವರಿಗೆ ಆರ್ಥಿಕ ನೆರವನ್ನು ನೀಡುವ ಮೂಲಕ ನೆರವಾಗಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಸಂಘದ ಗೌರವಾಧ್ಯಕ್ಷ ಕೆ.ಎಂ.ನಾಗರಾಜು, ಪ್ರಧಾನ ಕಾರ್ಯದರ್ಶಿ ಅಶೋಕ್ ಬಾಬು, ಕಾರ್ಯದರ್ಶಿ ಸಿ.ಮಂಜುನಾಥ್, ಎಚ್.ಟಿ.ಬೈರೇಶ್, ಮಂಜುನಾಥ್, ಬೇಡಿಗನಹಳ್ಳಿ ಕುಮಾರ್, ಕೆ.ಎಂ.ಮಹೇಶ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net