ಹಮಾಲರಿಗೆ ಆರ್ಥಿಕ ನೆರವು ಒದಗಿಸಿ

24SAVADATTI1-Web
ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಹಮಾಲರ ಸಂಘದ ಪದಾಧಿಕಾರಿಗಳು ಪ್ರತಿಭಟಿಸಿ, ಗ್ರೇಡ್-2 ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು. ಸಿದ್ದಪ್ಪ ಉಳ್ಳಿಗೇರಿ, ಶ್ರೀಕಾಂತ ಹಟ್ಟಿಹೊಳಿ, ಸಿದ್ದಪ್ಪ ನಡುವಿನಹಳ್ಳಿ, ಮಲಿಕಸಾಬ ಬಾಗೋಜಿಕೊಪ್ಪ, ಶಿವಪ್ಪ ಹಂಚಿನಾಳ, ಗಪ್ಪರಸಾಬ ಪಠಾಣ ಇದ್ದರು.
Published on

ಸವದತ್ತಿ: ಲಾಕ್‌ಡೌನ್‌ನಿಂದಾಗಿ ಉದ್ಯೋಗ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ಹಮಾಲಿ ಕಾರ್ಮಿಕರಿಗೆ ಆರ್ಥಿಕ ನೆರವು, ಆಹಾರ ಧಾನ್ಯಗಳ ಕಿಟ್ ವಿತರಿಸಬೇಕು ಎಂದು ಕಾರ್ಮಿಕ ಸಂಘದ ಮುಖಂಡ ಎಲ್.ಎಸ್. ನಾಯಕ ಆಗ್ರಹಿಸಿದ್ದಾರೆ.

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪಟ್ಟಣದ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಹಮಾಲರ ಸಂಘದ ನೇತೃತ್ವದಲ್ಲಿ ನಡೆಸುತ್ತಿದ್ದ ಧರಣಿಯ ಎರಡನೇ ದಿನವಾದ ಗುರುವಾರ ಗ್ರೇಡ್-2 ತಹಸೀಲ್ದಾರ್ ಎಂ.ಎನ್.ಮಠದ ಮೂಲಕ ಸಿಎಂಗೆ ಮನವಿ ಸಲ್ಲಿಸಿ ಮಾತನಾಡಿದರು.

ರಾಜ್ಯ ಸರ್ಕಾರ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಮಾಡಿ ಮುಕ್ತ ಮಾರುಕಟ್ಟೆಗೆ ಅವಕಾಶ ಕಲ್ಪಿಸಿದೆ. ಇದರಿಂದಾಗಿ ಹತ್ತಾರು ವರ್ಷಗಳಿಂದ ಎಪಿಎಂಸಿ ಆವರಣದಲ್ಲಿ ಕೆಲಸ ನಿರ್ವಹಿಸುತ್ತಿರುವ ಹಮಾಲಿಗಳು ಉದ್ಯೋಗ ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ. ಹಮಾಲಿ ಕಾರ್ಮಿಕರಿಗೆ ಸ್ಥಳೀಯವಾಗಿ ರಾಜ್ಯದ ಹಲವಾರು ಎಪಿಎಂಸಿಗಳಲ್ಲಿ ಮತ್ತು ನಗರ ಗ್ರಾಮೀಣ ಪ್ರದೇಶದಲ್ಲಿ ನನೆಗುದಿಗೆ ಬಿದ್ದಿರುವ ವಸತಿ ಯೋಜನೆ ಜಾರಿಗೆ ಅಗತ್ಯ ಕ್ರಮವಹಿಸಬೇಕು. ಹಮಾಲಿ ಕಾರ್ಮಿಕರಿಗೆ ಸೂಕ್ತ ವಸತಿ ಯೋಜನೆ ಜಾರಿ ಮಾಡಬೇಕು. ಕೋವಿಡ್-9 ಹಾಗೂ ಲಾಕ್‌ಡೌನ್‌ನಿಂದಾಗಿ ಉದ್ಯೋಗ ಕಳೆದುಕೊಂಡು ಸಮಸ್ಯೆಗೆ ಸಿಲುಕಿದ ಹಮಾಲರಿಗೆ ತಿಂಗಳಿಗೆ 7,500 ರೂ. ನಂತೆ 6 ತಿಂಗಳ ಆರ್ಥಿಕ ನೆರವು ಘೋಷಣೆ ಮಾಡಬೇಕು ಎಂದು ಆಗ್ರಹಿಸಿದರು. ಹಮಾಲಿ ಕಾರ್ಮಿಕರ ಸಂಘದ ಅಧ್ಯಕ್ಷ ಸಿದ್ದಪ್ಪ ಉಳ್ಳಿಗೇರಿ, ಶ್ರೀಕಾಂತ ಹಟ್ಟಿಹೊಳಿ, ಸಿದ್ದಪ್ಪ ನಡುವಿನಹಳ್ಳಿ, ಮಲಿಕಸಾಬ ಬಾಗೋಜಿಕೊಪ್ಪ, ಶಿವಪ್ಪ ಹಂಚಿನಾಳ, ಗಪ್ಪರಸಾಬ ಪಠಾಣ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net