7ನೇ ವೇತನ ಆಯೋಗದ ಆರ್ಥಿಕ ಸೌಲಭ್ಯ ಒದಗಿಸಿ

Provide financial facility of 7th Pay Commission
ಹುನಗುಂದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ನಿವೃತ್ತ ನೌಕರರ ತಾಲೂಕು ವೇದಿಕೆ ಅಧ್ಯಕ್ಷ ಎಂ.ಬಿ. ಗಂಜಿಹಾಳ ಮಾತನಾಡಿದರು. ಜಿಲ್ಲಾ ಸಂಚಾಲಕ ಎ.ಆರ್. ನಡುವಿನಮನಿ, ಬಿ.ಆರ್. ಮಸ್ಕಿ ಇತರರಿದ್ದರು.
Published on

ಹುನಗುಂದ: ಏಳನೇ ವೇತನ ಆಯೋಗದ ಆರ್ಥಿಕ ಸೌಲಭ್ಯಗಳು ನಮಗೂ ಒದಗಿಸಬೇಕೆಂದು ಆಗ್ರಹಿಸಿ ತಾಲೂಕು ನಿವೃತ್ತ ನೌಕರರ ವೇದಿಕೆ ಅಧ್ಯಕ್ಷ ಎಂ.ಬಿ. ಗಂಜಿಹಾಳ ಸರ್ಕಾರಕ್ಕೆ ಆಗ್ರಹಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜುಲೈ 1, 2022ರಿಂದ ಜುಲೈ 31, 2024ರ ಅವಧಿಯಲ್ಲಿ ನಿವೃತ್ತರಾದ ನೌಕರರಿಗೆ ಪರಿಷ್ಕೃತ ವೇತನದ ಶ್ರೇಣಿಯಲ್ಲಿ ಸೌಲಭ್ಯಗಳು ದೊರೆಯುತ್ತಿಲ್ಲ. ಸೌಲಭ್ಯಗಳಾದ ಡಿಸಿಆರ್‌ಜಿ, ಕಮ್ಯುಟೇಸನ್, ಇಎಲ್‌ಎನ್ ಕ್ಯಾಶ್ಮೆಂಟ್ ಲೆಕ್ಕಚಾರದಲ್ಲಿ ತುಂಬ ವ್ಯತ್ಯಾಸವಿದ್ದು, ಅದನ್ನು ಸರಿಪಡಿಸಿ ನ್ಯಾಯೋಚಿತವಾಗಿ ಆರ್ಥಿಕ ಸೌಲಭ್ಯಗಳನ್ನು ದೊರಕಿಸಿಕೊಡಬೇಕು. ಈಗಾಗಲೇ ಈ ಕುರಿತು ನಿವೃತ್ತ ನೌಕರರು ರಾಜ್ಯಾದ್ಯಂತ ಹೋರಾಟಗಳನ್ನು ನಡೆಸಲಾಗಿದೆ. ಮುಖ್ಯಮಂತ್ರಿ ಸೇರಿ ಸಂಬಂಧಿಸಿದವರಿಗೆ ಮನವಿ ಸಲ್ಲಿಸಲಾಗಿದೆ. ಶೀಘ್ರ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಉಗ್ರ ಹೋರಾಟ ಮಾಡಬೇಕಾಗುವುದೆಂದು ಎಚ್ಚರಿಸಿದರು.

ನಿವೃತ್ತ ನೌಕರರ ತಾಲೂಕು ಘಟಕದ ಅಧ್ಯಕ್ಷ ಎ.ಕೆ. ಉಪನಾಳ ಮಾತನಾಡಿ, ಆರ್ಥಿಕ ಸೌಲಭ್ಯಗಳನ್ನು ದೊರಕಿಸಿ ಕೊಡುವಂತೆ ನಿವೃತ್ತ ನೌಕರರು ನಡೆಸುತ್ತಿರುವ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲ ಇದೆ ಎಂದು ತಿಳಿಸಿದರು. ನಿವೃತ್ತ ನೌಕರರ ವೇದಿಕೆ ಜಿಲ್ಲಾ ಸಂಚಾಲಕ ಎ.ಆರ್. ನಡುವಿನಮನಿ, ಬಿ.ಆರ್. ಮಸ್ಕಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net