ರೈತರಿಗೆ ಸರ್ಕಾರದ ಸೌಲಭ್ಯ ಕಲ್ಪಿಸಿ

Provide government facilities to farmers
ಕೂಡಲಸಂಗಮ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಗೋದಾಮು ಮತ್ತು ವಾಣಿಜ್ಯ ಮಳಿಗೆಯನ್ನು ಶಾಸಕ ವಿಜಯಾನಂದ ಕಾಶಪ್ಪನವರ ಉದ್ಘಾಟಿಸಿದರು. ಕೂಡಲಸಂಗಮ ಸಾರಂಗಮಠದ ಅಭಿನವ ಜಾತವೇದ ಶಿವಾಚಾರ್ಯರು, ಮಹಾಂತೇಶ ಲಗಮನ್ನವರ, ಗಂಗಣ್ಣ ಬಾಗೇವಾಡಿ ಇತರರಿದ್ದರು.
Published on

ಕೂಡಲಸಂಗಮ: ರೈತರಿಗೆ ಸರ್ಕಾರದ ಸೌಲಭ್ಯ ಕಲ್ಪಿಸುವ ಕಾರ್ಯವನ್ನು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು ಪ್ರಾಮಾಣಿಕವಾಗಿ ಮಾಡಬೇಕೆಂದು ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.

ಕೂಡಲಸಂಗಮ ಪುನರ್ವಸತಿ ಕೇಂದ್ರದಲ್ಲಿ ಶನಿವಾರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ನೂತನವಾಗಿ ನಿರ್ಮಿಸಿದ ಗೋದಾಮು ಮತ್ತು ವಾಣಿಜ್ಯ ಮಳಿಗೆ ಉದ್ಘಾಟಿಸಿ ಅವರು ಮಾತನಾಡಿದರು.

ಕೂಡಲಸಂಗಮ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ವಾಣಿಜ್ಯ ಮಳಿಗೆ ನಿರ್ಮಿಸುವ ಮೂಲಕ ಆದಾಯ ತರುವ ಕಾರ್ಯ ಮಾಡಿರುವುದು ಸಂತಸ ತಂದಿದೆ. ಇಂತಹ ಕಾರ್ಯವನ್ನು ಎಲ್ಲ ಸಹಕಾರಿ ಸಂಘಗಳು ಮಾಡಬೇಕು. ಸಹಕಾರಿ ಸಂಘಗಳ ಅಭಿವೃದ್ಧಿಗೆ ನಾನು ಸದಾ ಬೆಂಬಲ ಕೊಡುತ್ತೇನೆ ಎಂದರು.
ಕೂಡಲಸಂಗಮ ಸಾರಂಗಮಠದ ಅಭಿನವ ಜಾತವೇದ ಶಿವಾಚಾರ್ಯರು ಸಾನ್ನಿಧ್ಯ ವಹಿಸಿದ್ದರು.

ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಮಹಾಂತೇಶ ಲಗಮನ್ನವರ ಅಧ್ಯಕ್ಷತೆ ವಹಿಸಿದ್ದರು.

ಹುನಗುಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಂಗಾಧರ ದೊಡಮನಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಗಂಗಣ್ಣ ಬಾಗೇವಾಡಿ, ಗ್ರಾಪಂ ಅಧ್ಯಕ್ಷೆ ಗಂಗಮ್ಮ ರಾಂಪೂರ, ಉಪಾಧ್ಯಕ್ಷೆ ರೂಪಾ ನಂದಿಕೇಶ್ವರ, ಮುಖಂಡರಾದ ಮುತ್ತಣ್ಣ ಕುರಿ, ಶೇಖರಗೌಡ ಗೌಡರ, ಪಿಕೆಪಿಎಸ್ ಸದಸ್ಯರು ಇದ್ದರು, ಕೆ.ಆರ್. ದೇಶಪಾಂಡೆ ನಿರೂಪಿಸಿ, ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net