

ರಾಯಚೂರು: ನಗರದ ವಾರ್ಡ್ ಸಂಖ್ಯೆ 28ರಲ್ಲಿ ಬರುವ ಆಶ್ರಯ ಕಾಲನಿ ಮತ್ತು ಕಾಳಿದಾಸ ನಗರ ಬಡಾವಣೆಗಳಿಗೆ ಅಗತ್ಯ ಮೂಲ ಸೌಕರ್ಯ ಕಲ್ಪಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಒತ್ತಾಯಿಸಿದೆ.
ಸಮಿತಿ ನಿಯೋಗ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಮಹ್ಮದ್ ಅನ್ೀಗೆ ಗುರುವಾರ ಮನವಿ ಸಲ್ಲಿಸಿ, ಬಡಾವಣೆಗಳಲ್ಲಿ ಜನರು ಕಳೆದ 25 ವರ್ಷಗಳಿಂದ ಅಗತ್ಯ ಮೂಲ ಸೌಕರ್ಯಗಳಿಲ್ಲದೆ ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ದೂರಿದರು.
ಕುಡಿಯುವ ನೀರು, ರಸ್ತೆ, ಬೀದಿ ದೀಪ, ಚರಂಡಿ, ಸಾರ್ವಜನಿಕ ಶೌಚಾಲಯಗಳಿಲ್ಲದ ಕಾರಣ ಜನರು ತೊಂದರೆ ಎದುರಿಸುತ್ತಿದ್ದಾರೆ. ಮಹಿಳೆಯರು ರಾತ್ರಿ ಸಮಯದಲ್ಲಿ ಬಹಿರ್ದೆಸೆಗೆ ಹೋಗಲು ಸಂಕಷ್ಟ ಎದುರಿಸುತ್ತಿದ್ದಾರೆ. ಜನಪ್ರತಿನಿಗಳು ಹಾಗೂ ನಗರಸಭೆ ಅಕಾರಿಗಳಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ.
ಕೂಡಲೇ ಎರಡು ಬಡಾವಣೆಗಳಿಗೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಲು ಕ್ರಮಕೈಗೊಳ್ಳಬೇಕು. ಇಲ್ಲವಾದರಲ್ಲಿ ಜಿಲ್ಲಾಕಾರಿ ಕಚೇರಿ ಮುಂದೆ ಅನಿರ‌್ಷ್ಟ ಧರಣಿ ನಡೆಸಲಾಗುವುದು ಎಂದು ಮನವಿಯಲ್ಲಿ ಎಚ್ಚರಿಸಲಾಗಿದೆ.
ನಿಯೋಗದಲ್ಲಿ ಸಮಿತಿ ಜಿಲ್ಲಾ ಸಂಚಾಲಕ ಎಸ್.ನರಸಿಂಹಲು, ಪದಾಕಾರಿಗಳಾದ ಅನ್ವರ್, ಸೈಯ್ಯದ್ ಬಾಬಾ, ಸಾಬೀರ್, ಮುಸ್ತಾ, ಮಾರೆಪ್ಪ, ನಲ್ಲಾರೆಡ್ಡಿ ಇದ್ದರು.