ಗ್ರಾಮ ಆಡಳಿತಾಧಿಕಾರಿಗಳಿಗೆ ಮೂಲಸೌಕರ್ಯ ಕಲ್ಪಿಸಿ

26 nrp 1
Published on

ಎನ್.ಆರ್.ಪುರ: ತಾಲೂಕು ಗ್ರಾಮ ಆಡಳಿತಾಧಿಕಾರಿಗಳಿಗೆ ಸರ್ಕಾರ ಆ್ಯಫ್ ನೀಡಿ ಅಲ್ಪ ಕಾಲಾಧಿವಯೊಳಗೆ ಕೆಲಸ ಮಾಡುವಂತೆ ಒತ್ತಡ ಹೇರುತ್ತಿದ್ದಾರೆ ಎಂದು ಗ್ರಾಮ ಆಡಳಿತಾಧಿಕಾರಿಗಳ ತಾಲೂಕು ಸಂಘದ ಅಧ್ಯಕ್ಷ ಜಿ.ಸಿ.ಸುನೀಲ್ ಅಸಮಾಧಾನ ವ್ಯಕ್ತಪಡಿಸಿದರು.
ತಾಲೂಕು ಕಚೇರಿ ಆವರಣದಲ್ಲಿ ತಾಲೂಕು ಗ್ರಾಮ ಆಡಳಿತಾಧಿಕಾರಿಗಳು ನಡೆಸುತ್ತಿರುವ ಅರ್ನಿಷ್ಟಾವಧಿ ಮುಷ್ಕರದಲ್ಲಿ ಮಾತನಾಡಿದ ಅವರು, ಸರ್ಕಾರವು ನಮಗೆ ಮೂಲ ಸೌಕರ್ಯ ಕೊಟ್ಟಿಲ್ಲ. ನಾವು ಕರ್ತವ್ಯಕ್ಕೆ ಬರುವ ಮುಂಚೆಯೂ ವಿಸಿ ಸಭೆ ಇರುತ್ತದೆ. ಕಚೇರಿ ಕೆಲಸ ಮುಗಿದ ನಂತರವೂ ವಿಸಿ ಇರುತ್ತದೆ. ಆದ್ದರಿಂದ ಕೆಲಸದ ಅವಧಿಗೂ ಮುನ್ನ ಹಾಗೂ ಕೆಲಸದ ಅವಧಿ ನಂತರ ವರ್ಚುವಲ್ ಸಭೆಗಳನ್ನು ನಿಷೇಧಿಸಬೇಕು ಎಂದು ಆಗ್ರಹಿಸಿದರು. ಮೊಬೈಲ್ ತತ್ರಾಂಶಗಳ ಕೆಲಸದ ವಿಚಾರವಾಗಿ ಇದುವರೆಗೆ ಆಗಿರುವ ಎಲ್ಲ ಅಮಾನತ್ತುಗಳನ್ನು ರದ್ದುಪಡಿಸಿ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
ಬೆಳೆ ಸಮೀಕ್ಷೆ ಹಾಗೂ ಬೆಳೆ ಹಾನಿ ಪರಿಹಾರದ ಕೆಲಸಗಳನ್ನು ಕೃಷಿ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆಗೆ ನಿರ್ವಹಿಸುವಂತೆ ಆದೇಶ ನೀಡಬೇಕು .ಮಳೆ ಹಾನಿ ಪ್ರಕರಣಗಳ ಜವಾಬ್ದಾರಿಯನ್ನು ಕೈ ಬಿಡಬೇಕು. ಸರ್ಕಾರ ನಮ್ಮ ಮನವಿಗೆ ಸ್ಪಂದಿಸದಿದ್ದರೆ ಪೆನ್‌ಡೌನ್ ಚಳವಳಿ ಮಾಡುತ್ತೇವೆ ಎಂದರು.
ನೌಕರರ ಸಂಘದ ಅಧ್ಯಕ್ಷ ಎಚ್.ಮಂಜುನಾಥ್ ಮಾತನಾಡಿ, ಗ್ರಾಮ ಆಡಳಿತಾಧಿಕಾರಿಗಳಿಗೆ ಸರ್ಕಾರ ಸರಿಯಾದ ಮೂಲ ಸೌಕರ್ಯ ನೀಡದೆ ಕೆಲಸ ಮಾಡಿಸಿಕೊಳ್ಳುತ್ತಿರುವುದರಿಂದ ಮಾನಸಿಕ ಒತ್ತಡಕ್ಕೆ ಳಗಾಗಿದ್ದಾರೆ. ಸರ್ಕಾರ ಗ್ರಾಮ ಆಡಳಿತಾಧಿಕಾರಿಗಳ ನ್ಯಾಯಯುತ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿದರು. ಗ್ರಾಮ ಆಡಳಿತಾಧಿಕಾರಿಗಳ ಸಂಘದ ಕಾರ್ಯದರ್ಶಿ ಜೆ.ನವೀನ್, ಖಜಾಂಚಿ ಟಿ.ಮಂಜುಳಾ, ಉಪಾಧ್ಯಕ್ಷ ವಿಶ್ವನಾಥ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net