ಶಾಲೆಗೆ ಮೂಲಸೌಕರ್ಯ ಒದಗಿಸಿ

Published on

ಬಳ್ಳಾರಿ ; ತಾಲೂಕಿನ ತಿರುಮಲ ನಗರ ಕ್ಯಾಂಪ್ ಸರ್ಕಾರಿ ಶಾಲೆಗೆ ಮೂಲ ಸೌಕರ್ಯ ಒದಗಿಸಲು ಆಗ್ರಹಿಸಿ ಇಲ್ಲಿನ ಬಿಇಒ ಕಚೇರಿ ಮುಂಭಾಗದಲ್ಲಿ ಎಐಡಿಎಸ್‌ಒ ಸಂಘಟನೆಯಿಂದ ಮಂಗಳವಾರ ಪ್ರತಿಭಟನೆ ನಡೆಯಿತು.

ಎಐಡಿಎಸ್‌ಒ ಜಿಲ್ಲಾಧ್ಯಕ್ಷ ಕೆ.ಈರಣ್ಣ ಮಾತನಾಡಿ, ತಿರುಮಲ ನಗರ ಕ್ಯಾಂಪ್‌ನಲ್ಲಿರುವ ಶಾಲೆಯು ಮೂರು ಕೊಠಡಿಗಳನ್ನುಒಳಗೊಂಡಿದ್ದು, ಆ ಕಟ್ಟಡವು ಸಂಪೂರ್ಣವಾಗಿ ಹಾಳಾಗಿದೆ. ಮಳೆ ಬಂದರೆ ಮೇಲ್ಛಾವಣಿ ಕುಸಿದು ಬೀಳುವ ಸ್ಥಿತಿಯಲ್ಲಿದೆ. ಶೌಚಾಲಯ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ನರುಳುತ್ತಿದೆ. ಇದರಿಂದಾಗಿ ಸರ್ಕಾರಿ ಶಾಲೆಯ ಗುಣಮಟ್ಟ ಕಳೆದು ಕೊಳ್ಳುತ್ತಿದ್ದು, ಪ್ರತಿವರ್ಷ ದಾಖಲಾತಿ ಸಂಖ್ಯೆ ಕುಸಿಯುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಶಾಲೆಯ ಕಟ್ಟಡ ದುರಸ್ತಿಗೊಳಿಸಿ ಮತ್ತು ಕಟ್ಟಡ ಸಂಖ್ಯೆ ಹೆಚ್ಚಿಸಬೇಕು. ಶೌಚಾಲಯ ಹಾಗೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ನೂತನ ಕೌಂಪೌಂಡ್ ನಿರ್ಮಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು. ಸರ್ಕಾರಿ ತೆಲುಗು ಕಿರಿಯ ಪ್ರಾಥಮಿಕ ಶಾಲೆಯಲ್ಲಿ, ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಿಕ್ಷಣ ಪ್ರಾರಂಭಿಸಬೇಕು ಎಂದು ಆಗ್ರಹಿಸಿದರು. ಬಳಿಕ ಬಿಇಒ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net