ಮೃತ ವಿದ್ಯಾರ್ಥಿನಿ ಕುಟುಂಬಕ್ಕೆ ನ್ಯಾಯ ಒದಗಿಸಿ

20-04-Shiva-4
ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಖಂಡಿಸಿ ರಾಯಚೂರಿನ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಪ್ರಶಾಂತಕುಮಾರಗೆ ಎಐಡಿಎಸ್‌ಒ, ಎಐಡಿವೈಒ ಮತ್ತು ಎಐಎಂಎಸ್‌ಎಸ್‌ನಿಂದ ಶನಿವಾರ ಮನವಿ ಸಲ್ಲಿಸಲಾಯಿತು. ಎಐಡಿವೈಒ ಜಿಲ್ಲಾಧ್ಯಕ್ಷ ಚನ್ನಬಸವ ಜಾನೇಕಲ್, ಎಐಎಂಎಸ್‌ಎಸ್ ಜಿಲ್ಲಾ ಸಂಘಟಕಿ ಸರೋಜಾ ಗೋನ್ವಾರ್, ಎಐಡಿಎಸ್‌ಒ ಜಿಲ್ಲಾ ಕಾರ್ಯದರ್ಶಿ ಬಸವರಾಜ, ಮುಖಂಡರಾದ ಪದಾಕಾರಿಗಳಾದ ನಾಗವೇಣಿ, ನಾಗರತ್ನ, ಪೀರಸಾಬ್, ವೌನೇಶ, ವೀರೇಶ ಇದ್ದರು.
Published on

ರಾಯಚೂರು: ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ನಡೆದಿರುವುದು ತೀವ್ರ ಖಂಡನೀಯವಾಗಿದ್ದು, ಮೃತ ವಿದ್ಯಾರ್ಥಿನಿ ಕುಟುಂಬಕ್ಕೆ ನ್ಯಾಯ ಒದಗಿಸಲು ಸರ್ಕಾರ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಎಐಡಿಎಸ್‌ಒ, ಎಐಡಿವೈಒ ಮತ್ತು ಎಐಎಂಎಸ್‌ಎಸ್ ಒತ್ತಾಯಿಸಿದೆ.
ಸಂಘಟನೆಗಳ ನಿಯೋಗ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಪ್ರಶಾಂತಕುಮಾರಗೆ ಶನಿವಾರ ಮನವಿ ಸಲ್ಲಿಸಿ, ಕೊಲೆ ನಡೆಸಿದ ಯಾಜ್‌ಗೆ ವೇಗವಾಗಿ ಉಗ್ರ ಶಿಕ್ಷೆಗೆ ಒಳಪಡಿಸಲು ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದರು.
ಹತ್ಯೆ ತೀವ್ರ ಬರ್ಬರವಾಗಿ ನಡೆದಿದ್ದು, ಒಂದು ಅಮಾಯಕ ಜೀವ ವಿಕೃತ ವ್ಯಕ್ತಿಗೆ ಬಲಿಯಾಗಿದೆ. ಘಟನೆ ಬಗ್ಗೆ ತ್ವರಿತಗತಿಯಲ್ಲಿ ತನಿಖೆ ನಡೆಸಿ ದುಷ್ಕರ್ಮಿಗೆ ಶಿಕ್ಷೆ ವಿಸಬೇಕು. ಘಟನೆಯನ್ನು ರಾಜಕೀಯವಾಗಿ ಬಳಸಿಕೊಳ್ಳುವುದನ್ನು ನಿಲ್ಲಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ನಿಯೋಗದಲ್ಲಿ ಎಐಡಿವೈಒ ಜಿಲ್ಲಾಧ್ಯಕ್ಷ ಚನ್ನಬಸವ ಜಾನೇಕಲ್, ಎಐಎಂಎಸ್‌ಎಸ್ ಜಿಲ್ಲಾ ಸಂಘಟಕಿ ಸರೋಜಾ ಗೋನ್ವಾರ್, ಎಐಡಿಎಸ್‌ಒ ಜಿಲ್ಲಾ ಕಾರ್ಯದರ್ಶಿ ಬಸವರಾಜ, ಮುಖಂಡರಾದ ಪದಾಕಾರಿಗಳಾದ ನಾಗವೇಣಿ, ನಾಗರತ್ನ, ಪೀರಸಾಬ್, ವೌನೇಶ, ವೀರೇಶ, ನಂದಗೋಪಾಲ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net