ನೇಕಾರರಿಗೆ ಕಾರ್ಮಿಕ ಸೌಲಭ್ಯ ಒದಗಿಸಿ

Provide labor facility to weavers
ಕಾರ್ಮಿಕರಂತೆ ನೇಕಾರರಿಗೂ ಕಾರ್ಮಿಕ ಸೌಲಭ್ಯಗಳನ್ನು ನೀಡಬೇಕೆಂದು ಆಗ್ರಹಿಸಿ ಮಹಾಲಿಂಗಪುರದ ರಾಜ್ಯ ನೇಕಾರ ಸೇವಾ ಸಂಘದ ಅಧ್ಯಕ್ಷ ಶಿವಲಿಂಗ ಟಿರಕಿ ಬೆಂಗಳೂರಿನ ವಿಧಾನಸೌಧದಲ್ಲಿ ಮಂಗಳವಾರ ಸಂಜೆ ಕಾರ್ಮಿಕ ಸಚಿವ ಸಂತೋಷ ಲಾಡ್ ಅವರಿಗೆ ಮನವಿ ಪತ್ರ ನೀಡಿದರು. ಮುಖಂಡರಾದ ಅರ್ಜುನ ಕುಂಬಾರ, ಮಂಜುನಾಥ ಹಣಗಿ, ಹಯಾತಚಂದ ಜಮಾದಾರ, ಸುಧೀರ ರುಕಾಜೇ ಇತರರಿದ್ದರು.
Published on

ಮಹಾಲಿಂಗಪುರ: ಕಾರ್ಮಿಕರಂತೆ ನೇಕಾರರಿಗೂ ಕಾರ್ಮಿಕ ಸೌಲಭ್ಯಗಳನ್ನು ನೀಡಬೇಕೆಂದು ಆಗ್ರಹಿಸಿ ರಾಜ್ಯ ನೇಕಾರ ಸೇವಾ ಸಂಘದ ಅಧ್ಯಕ್ಷ ಶಿವಲಿಂಗ ಟಿರಕಿ ಬೆಂಗಳೂರಿನ ವಿಧಾನಸೌಧದಲ್ಲಿ ಮಂಗಳವಾರ ಸಂಜೆ ಕಾರ್ಮಿಕ ಸಚಿವ ಸಂತೋಷ ಲಾಡ್ ಅವರಿಗೆ ಮನವಿ ಪತ್ರ ನೀಡಿದರು.
ಈ ಕುರಿತು ಈಗಾಗಲೇ ಹಲವಾರು ಬಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ತಿಳಿಸಿದರು.

ವಿವಿಧೆಡೆಯಿಂದ ನೇಕಾರ ಮುಖಂಡರಾದ ಅರ್ಜುನ ಕುಂಬಾರ, ಮಂಜುನಾಥ ಹಣಗಿ, ಹಯಾತಚಂದ ಜಮಾದಾರ, ಸುಧೀರ ರುಕಾಜೇ, ಸೋಮನಾಥ ಪರಕಾಳೆ, ಮಹಾದೇವ ಸ್ವಾಮಿ, ಗುಂಡಪ್ಪ ಹಾನಾಪುರ ಇದ್ದರು.

‘ವಿಜಯವಾಣಿ’ ಪ್ರತಿನಿಧಿಯೊಂದಿಗೆ ಮಾತನಾಡಿದ ಶಿವಲಿಂಗ ಟಿರಕಿ, ಈಗಾಗಲೇ ಈ ಕುರಿತು ಕ್ರಮ ವಹಿಸಲಾಗಿದ್ದು, ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ ಸಂಪೂರ್ಣ ಮಾಹಿತಿ ಪಡೆದುಕೊಳ್ಳಲಾಗಿದೆ. ಇನ್ನು ಒಂದು ತಿಂಗಳಲ್ಲಿ ಯೋಜನೆ ಜಾರಿಗೊಳಿಸಿ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಸಚಿವ ಲಾಡ್ ತಿಳಿಸಿದ್ದಾರೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net