ಗಾಡಿಜೋಗಿಹುಂಡಿಗೆ ಅಗತ್ಯ ಸೌಕರ್ಯ ಕಲ್ಪಿಸಿ

ಗಾಡಿಜೋಗಿಹುಂಡಿ ಗ್ರಾಮದ ರಸ್ತೆಯನ್ನು ಅಭಿವೃದ್ಧಿ ಪಡಿಸುವಂತೆ ಗ್ರಾಮಸ್ಥರು  ಒತ್ತಾಯಿಸಿದರು.
ಗಾಡಿಜೋಗಿಹುಂಡಿ ಗ್ರಾಮದ ರಸ್ತೆಯನ್ನು ಅಭಿವೃದ್ಧಿ ಪಡಿಸುವಂತೆ ಗ್ರಾಮಸ್ಥರು ಒತ್ತಾಯಿಸಿದರು.
Published on

ಬನ್ನೂರು: ಚರಂಡಿ, ರಸ್ತೆ ನಿರ್ಮಾಣ, ಕೆರೆಯ ಮೇಲ್ಬಾಗದ ರಸ್ತೆಯ ಅಕ್ಕಪಕ್ಕ ವಿದ್ಯುತ್ ದೀಪ ಅಳವಡಿಸುವ ಮೂಲಕ ಅಗತ್ಯ ಸೌಕರ್ಯ ಒದಗಿಸಬೇಕೆಂದು ಕೊಡಗಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾಡಿಜೋಗಿಹುಂಡಿ ಗ್ರಾಮಸ್ಥರು ಆಗ್ರಹಿಸಿದ್ದಾರೆ.

2019-20ನೇ ಸಾಲಿನಲ್ಲಿ ಗಾಡಿಜೋಗುಹುಂಡಿ ರಸ್ತೆಗಳಿಗೆ ಡಾಂಬರೀಕರಣ ಮಾಡುವ ಸಲುವಾಗಿ ಕ್ರಿಯಾ ಯೋಜನೆ ರೂಪಿಸಿ ಅದಕ್ಕೆ ಅನುಮತಿ ಪಡೆಯಲಾಗಿತ್ತು. ಅಂದಿನ ಲೋಕೋಪಯೋಗಿ ಸಚಿವರಾಗಿದ್ದ ಮಹದೇವಪ್ಪ ಅವರ ಗಮನಕ್ಕೂ ತಂದು ರಸ್ತೆಗಳನ್ನು ಅಭಿವೃದ್ಧಿಗೊಳಿಸಲು ಕೋರಲಾಗಿತ್ತು. ನಂತರ ಶಾಸಕ ಅಶ್ವಿನ್ ಕುಮಾರ್ ಗಮನಕ್ಕೆ ತಂದರೂ ಯಾವುದೇ ಪ್ರಯೋಜವಾಗಿಲ್ಲ ಎಂದು ಗ್ರಾಪಂ ಮಾಜಿ ಸದಸ್ಯ ಗೋವಿಂದರಾಜು ದೂರಿದರು.

ಗಾಡಿಜೋಗಿಹುಂಡಿ ಹಾಲು ಉತ್ಪಾದಕ ಸಹಕಾರ ಸಂಘದ ಕಾರ್ಯದರ್ಶಿ ಸಿದ್ದೇಗೌಡ ಮಾತನಾಡಿ, ಕೊಡಗಹಳ್ಳಿ ಗ್ರಾಮ ಪಂಚಾಯ್ತಿಯ ವತಿಯಿಂದ ಯಾವುದೇ ಅಭಿವೃದ್ಧಿ ಕೆಲಸ ಕಾರ್ಯಗಳು ನಡೆಯುತ್ತಿಲ್ಲ. ಹೀಗಾದರೆ ಗ್ರಾಮದ ಅಭಿವೃದ್ಧಿ ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ಹೋಬಳಿ ಉಪಾಧ್ಯಕ್ಷ ಮಾದಿಗಳ್ಳಿ ಮಹೇಶ್, ರಾಜು, ರಾಜೇಗೌಡ, ಪ್ರಕಾಶ, ಮಹೇಶ, ಕೃಷ್ಣಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net