ಹಾಸ್ಟೆಲ್‌ಗಳಲ್ಲಿ ಅಗತ್ಯ ಸೌಲಭ್ಯ ಒದಗಿಸಿ

ರಾಯಚೂರು ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ವಿದ್ಯಾರ್ಥಿಗಳು ಎಬಿವಿಪಿ ನೇತೃತ್ವದಲ್ಲಿ ಡಿಸಿ ಕಚೇರಿಯ ಗ್ರೇಡ್-2 ತಹಸೀಲ್ದಾರ್ ಪರಶುರಾಮಗೆ ಮನವಿ ಸಲ್ಲಿಸಿದರು. ಸಂಚಾಲಕ ಪಿ.ಗುರುಕಿರಣ್ ಶೆಟ್ಟಿ, ವಿದ್ಯಾರ್ಥಿಗಳಾದ ಸೌಭಾಗ್ಯ, ರೇಣುಕಾ, ಶಶಿಕಲಾ, ಕೃಷ್ಣವೇಣಿ, ಮೀನಾಕ್ಷಿ, ಹನುಮಂತ, ಪ್ರಸಾದ, ರಾಜೇಂದ್ರ ಇತರರಿದ್ದರು.

Published on

ರಾಯಚೂರು: ವಿದ್ಯಾರ್ಥಿ ವೇತನ ಬಿಡುಗಡೆ ಹಾಗೂ ಹಾಸ್ಟೆಲ್‌ಗಳಲ್ಲಿ ಅಗತ್ಯ ಸೌಲಭ್ಯ ಒದಗಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ಎಬಿವಿಪಿ ಸಂಘಟನೆ ನೇತೃತ್ವದಲ್ಲಿ ಬುಧವಾರ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಹಾಸ್ಟೆಲ್‌ಗಳಿಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳ ಆಯ್ಕೆ ಪ್ರಕ್ರಿಯೆ ಕೂಡಲೇ ಪೂರ್ಣಗೊಳಿಸಿ ಪ್ರವೇಶಾತಿ ನೀಡಬೇಕು. ವಿದ್ಯಾರ್ಥಿಗಳಿಗೆ ಸರ್ಕಾರದ ಕಿಟ್‌ಗಳನ್ನು ನೀಡಬೇಕು. ಪ್ರತಿ ವಿದ್ಯಾರ್ಥಿಗೆ ನೀಡುವ 1,850 ರೂ. ಊಟದ ಹಣ ಸಾಲುತ್ತಿಲ್ಲ. ಈ ಬಗ್ಗೆ ಪರಿಶೀಲಿಸಿ ಊಟದ ಹಣ ಹೆಚ್ಚಿಸಬೇಕು. ಸಮಾಜ ಕಲ್ಯಾಣ ಇಲಾಖೆಯ ಹಿಂದುಳಿದ ವರ್ಗ ಹಾಗೂ ಅಲ್ಪ ಸಂಖ್ಯಾತ ಇಲಾಖೆಯ ಹಾಸ್ಟೆಲ್‌ಗಳ ಸಂಖ್ಯೆ ಹೆಚ್ಚಳ ಮಾಡಬೇಕು. ಬಾಕಿ ವಿದ್ಯಾರ್ಥಿ ವೇತನವನ್ನು ತಕ್ಷಣವೇ ಖಾತೆಗೆ ಜಮೆ ಮಾಡಬೇಕು ಎಂದು ಒತ್ತಾಯಿಸಿ ಡಿಸಿ ಕಚೇರಿಯ ಗ್ರೇಡ್-2 ತಹಸೀಲ್ದಾರ್ ಪರಶುರಾಮಗೆ ಮನವಿ ಸಲ್ಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net