ಗ್ರಾಮಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸಿ

hutti protest
ಹಟ್ಟಿ ಹಳೇ ಬಸ್ ನಿಲ್ದಾಣದ ಆವರಣದಲ್ಲಿ ಕರವೇ ನೇತೃತ್ವದಲ್ಲಿ ವಿವಿಧ ಗ್ರಾಮಸ್ಥರು ಗುರುವಾರ ಧರಣಿ ನಡೆಸಿದರು. ಪ್ರಮುಖರಾದ ಮೌನೇಶ ಕಾಕಾನಗರ, ಕೆ.ವಿ. ಕಳ್ಳಿಮಠ, ರಾಮಾಂಜನೇಯ, ಯೋಗ ಮುರುಗನ್, ನಂದಯ್ಯ ಇತರರಿದ್ದರು.
Published on

ಹಟ್ಟಿಚಿನ್ನದಗಣಿ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪಟ್ಟಣದ ಹಳೇ ಬಸ್ ನಿಲ್ದಾಣ ಆವರಣದಲ್ಲಿ ಗುರುವಾರ ಕರವೇ ನೇತೃತ್ವದಲ್ಲಿ ಧರಣಿ ನಡೆಸಲಾಯಿತು.

ವೇದಿಕೆ ಹಟ್ಟಿ ಘಟಕದ ಅಧ್ಯಕ್ಷ ಮೌನೇಶ ಕಾಕಾನಗರ ಮಾತನಾಡಿ, ಹಟ್ಟಿ ಪಟ್ಟಣ, ಪೈದೊಡ್ಡಿ, ಮೇದಿನಾಪುರ ಸೇರಿದಂತೆ ವಿವಿಧ ಗ್ರಾಮಗಳಿಗೆ ಶುದ್ಧ ಕುಡಿವ ನೀರು ಪೂರೈಸಬೇಕು. ರಸ್ತೆ, ಒಳಚರಂಡಿ ಮತ್ತು ಬೆಳಕಿನ ವ್ಯವಸ್ಥೆ ಸುಧಾರಣೆ, ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು ಹಾಗೂ ಔಷಧಗಳ ಕೊರತೆ ಇದ್ದು ನಿವಾರಿಸಬೇಕು. ರೈತರಿಗೆ ಬೆಳೆ ವಿಮೆ ಸೌಲಭ್ಯ, ಗ್ರಾಮಗಳಿಂದ ಪಟ್ಟಣಕ್ಕೆ ಹೊಗಲು ಶಾಲಾ-ಕಾಲೇಜು ಮಕ್ಕಳಿಗೆ ಸರಿಯಾದ ಸಮಯಕ್ಕೆ ಬಸ್‌ಗಳ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು.

ಶಾಸಕ ಮಾನಪ್ಪ ವಜ್ಜಲ್ ಚುನಾವಣೆಯಲ್ಲಿ ಗೆದ್ದ ಬಳಿಕ ಗ್ರಾಮಗಳಿಗೆ ಭೇಟಿ ನೀಡಿಲ್ಲ. ಇದರಿಂದ ಬೆಸತ್ತು ಧರಣಿ ನಡೆಸುತ್ತಿದ್ದೇವೆ.ನಮ್ಮ ಬೇಡಿಕೆಗಳನ್ನು ಪೂರೈಸಬೇಕು. ಇಲ್ಲದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.

ಕಂದಾಯ ಇಲಾಖೆ ಆಡಳಿತಾಧಿಕಾರಿಗಳು ಸ್ಥಳಕ್ಕೆ ಬಂದು, ಪ್ರತಿಭಟನಾಕಾರರ ಸಮಸ್ಯೆಗಳನ್ನು ಆಲಿಸಿ ಶೀಘ್ರದಲ್ಲಿ ಪರಿಹರಿಸಲಾಗುವುದು ಎಂದು ಭರವಸೆ ನೀಡಿದರು. ಪ್ರಮುಖರಾದ ಕೆ.ವಿ. ಕಳ್ಳಿಮಠ, ರಾಮಾಂಜನೇಯ, ಯೋಗ ಮುರುಗನ್, ನಂದಯ್ಯ, ಜೆ.ನಾರಾಯಣ, ಲಿಂಗರೆಡ್ಡಿ, ಸೋಪಿಸಾಬ್, ಮಹಾಂತೇಶ, ವೀರೇಶ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net