ಅಸಂಘಟಿತ ಕಾರ್ಮಿಕರಿಗೆ ಅಗತ್ಯ ಸೌಲಭ್ಯ ಒದಗಿಸಿ

25-01-Shiva-2
ಅಸಂಘಟಿತ ಕಾರ್ಮಿಕರಿಗೆ ಅಗತ್ಯ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ರಾಯಚೂರಿನ ಸಂಸದ ರಾಜಾ ಅಮರೇಶ್ವರ ನಾಯಕ ಆಪ್ತ ಕಾರ್ಯದರ್ಶಿ ಶ್ರೀನಿವಾಸಗೆ ಸಿಐಟಿಯುನಿಂದ ಗುರುವಾರ ಮನವಿ ಸಲ್ಲಿಸಲಾಯಿತು. ಸಂಘಟನೆ ಜಿಲ್ಲಾಧ್ಯಕ್ಷೆ ಎಚ್.ಪದ್ಮಾ, ಪದಾಕಾರಿಗಳಾದ ಡಿ.ಎಸ್.ಶರಣಬಸವ, ಕೆ.ಜಿ.ವೀರೇಶ, ಶಬ್ಬೀರ್, ರುದ್ರಪ್ಪ ನಾಯಕ, ಅನ್ವರ್ ಪಾಷಾ, ಯುಸ್ೂ ಸಾಬ್, ನಿಂಗಪ್ಪ ವೀರಾಪುರ, ವೆಂಕಟೇಶ, ವೀರೇಶ, ಯಂಕಪ್ಪ, ಮರಿಸ್ವಾಮಿ, ರಾಮಣ್ಣ ಇದ್ದರು.
Published on

ರಾಯಚೂರು: ಅಸಂಘಟಿತ ಕಾರ್ಮಿಕರಿಗೆ ಅಗತ್ಯ ಸೌಲಭ್ಯ ಒದಗಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಸಿಐಟಿಯು ನೇತೃತ್ವದಲ್ಲಿ ಕಟ್ಟಡ ಮತ್ತು ಹಮಾಲಿ ಕಾರ್ಮಿಕರು ಸಂಸದ ರಾಜಾ ಅಮರೇಶ್ವರ ನಾಯಕ ಕಚೇರಿ ಮುಂದೆ ಗುರುವಾರ ಪ್ರತಿಭಟನೆ ನಡೆಸಿದರು.
ನಂತರ ಸಂಸದರ ಆಪ್ತ ಕಾರ್ಯದರ್ಶಿ ಶ್ರೀನಿವಾಸಗೆ ಮನವಿ ಸಲ್ಲಿಸಿ, ಪ್ರಸಕ್ತ ವರ್ಷದಿಂದಲೇ ಆದ್ಯತೆ ಮೇರೆಗೆ ಹಮಾಲಿ ಕಾರ್ಮಿಕರು, ಆಟೋ, ಟ್ಯಾಕ್ಸಿ ಚಾಲಕರು, ಮನೆ ಕೆಲಸಗಾರರು, ಬೀದಿ ಬದಿ ವ್ಯಾಪಾರಿಗಳು ಸೇರಿದಂತೆ ಅಸಂಘಟಿತ ಕಾರ್ಮಿಕರಿಗೆ ಭವಿಷ್ಯ ನಿ ಯೋಜನೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.
ಅಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ರಚಿಸಲಾಗಿರುವ ಸಾಮಾಜಿಕ ಭದ್ರತಾ ಮಂಡಳಿಯನ್ನು ಬಲಪಡಿಸಿ, ವಾರ್ಷಿಕ ನಿವ್ವಳ ಆದಾಯದ ಶೇ.3ರಷ್ಟು ಅನುದಾನ ಅಸಂಘಟಿತ ಕಾರ್ಮಿಕರ ಕಾರ್ಯಕ್ರಮಗಳಿಗೆ ಘೋಷಣೆ ಮಾಡಬೇಕು. ನಿರ್ದಿಷ್ಟ ಕಾಲಮಿತಿಯೊಳಗೆ ವಸತಿ ಯೋಜನೆಯನ್ನು ಜಾರಿಗೊಳಿಸಬೇಕು.
ಇ-ಶ್ರಮ ಯೋಜನೆಯಲ್ಲಿ ಗುರುತಿನ ಚೀಟಿ ಪಡೆದಿರುವ ಕಟ್ಟಡ, ಹಮಾಲಿ ಸೇರಿದಂತೆ ಎಲ್ಲ ಕುಟುಂಬಗಳಿಗೆ ಉಚಿತ ಶಿಕ್ಷಣ, ಆರೋಗ್ಯ, ಪಡಿತರ, ವಸತಿ ಯೋಜನೆಯನ್ನು ಜಾರಿಗೊಳಿಸಬೇಕು. ಕಲ್ಯಾಣ ಮಂಡಳಿಯಲ್ಲಿರುವ ನಿಯನ್ನು ಕಟ್ಟಡ ಕಾರ್ಮಿಕರ ಸೌಲಭ್ಯಗಳಿಗೆ ಮಾತ್ರ ಬಳಕೆ ಮಾಡಬೇಕು.
ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ಮಕ್ಕಳಿಗೆ ನೀಡುತ್ತಿರುವ ಶೈಕ್ಷಣಿಕ ಸಹಾಯ ಧನ ಕಡಿತ ಆದೇಶ ಹಿಂಪಡೆದು ಹಿಂದಿನಂತೆ ಮುಂದುವರಿಸಬೇಕು. ಬಾಕಿಯಿರುವ ಪಿಂಚಣಿ, ಮದುವೆ, ವೈದ್ಯಕೀಯ ಅರ್ಜಿಗಳನ್ನು ಇತ್ಯರ್ಥಪಡಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಪ್ರತಿಭಟನೆಯಲ್ಲಿ ಸಿಐಟಿಯು ಜಿಲ್ಲಾಧ್ಯಕ್ಷೆ ಎಚ್.ಪದ್ಮಾ, ಪದಾಕಾರಿಗಳಾದ ಡಿ.ಎಸ್.ಶರಣಬಸವ, ಕೆ.ಜಿ.ವೀರೇಶ, ಶಬ್ಬೀರ್, ರುದ್ರಪ್ಪ ನಾಯಕ, ಅನ್ವರ್ ಪಾಷಾ, ಯುಸ್ೂ ಸಾಬ್, ನಿಂಗಪ್ಪ ವೀರಾಪುರ, ವೆಂಕಟೇಶ, ವೀರೇಶ, ಯಂಕಪ್ಪ, ಮರಿಸ್ವಾಮಿ, ರಾಮಣ್ಣ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net