

ರಾಯಚೂರು: ಕೇಂದ್ರ ಸರ್ಕಾರದ ಜನ ಮತ್ತು ಕಾರ್ಮಿಕ ವಿರೋ ನೀತಿಗಳನ್ನು ಖಂಡಿಸಿ ಹಾಗೂ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಸ್ಥಳೀಯ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಎಐಯುಟಿಯುಸಿಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.
ನಂತರ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಪ್ರಶಾಂತಕುಮಾರಗೆ ಮನವಿ ಸಲ್ಲಿಸಿ, ಎಲ್ಲರಿಗೂ ಕಾಯಂ ಉದ್ಯೋಗ ಒದಗಿಸಬೇಕು. ವಿದ್ಯುತ್ ತಿದ್ದುಪಡಿ ಮಸೂದೆಯನ್ನು ಹಿಂಪಡೆಯಬೇಕು. ಪ್ರಿಪೇಯ್ಡಿ ಮೀಟರ್ ಅಳವಡಿಕೆ ನಿಲ್ಲಿಸಬೇಕು ಎಂದು ಒತ್ತಾಯಿಸಿದರು.
ಪಿಂಚಣಿದಾರರಿಗೆ ಬೆಲೆ ಸೂಚ್ಯಂಕ ಅನುಗುಣವಾದ ಪಿಂಚಣಿಯನ್ನು ಖಾತ್ರಿ ಪಡಿಸಬೇಕು. ಬೆಲೆ ಏರಿಕೆ ನಿಯಂತ್ರಿಸಿ ಅಗತ್ಯ ವಸ್ತುಗಳ ಮೇಲಿನ ಜಿಎಸ್‌ಟಿ ಹಿಂಪಡೆಯಬೇಕು. ಔಷಧ, ಪೆಟ್ರೋಲ್, ಡಿಸೇಲ್ ಮತ್ತು ಅಡುಗೆ ಅನಿಲ ಸಿಲೆಂಡರ್ ಬೆಲೆ ಏರಿಕೆಯನ್ನು ನಿಲ್ಲಿಸಬೇಕು.
ಗುತ್ತಿಗೆ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸಬೇಕು. ಸಮಾನ ಕೆಲಸಕ್ಕೆ ಸಮಾನ ವೇತನ ಖಾತ್ರಿ ಪಡಿಸಬೇಕು. ಹೊಸ ಪಿಂಚಣಿ ವ್ಯವಸ್ಥೆಯನ್ನು ಹಿಂಪಡೆದು ಹಳೇ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸಬೇಕು. ಕಾರ್ಮಿಕರ ವಿರೋ ಲೇಬರ್ ಕೋಡ್‌ಗಳನ್ನು ರದ್ದುಗೊಳಿಸಬೇಕು.
ಸಾರ್ವಜನಿಕ ವಲಯದ ಸಂಸ್ಥೆಗಳ ಖಾಸಗೀಕರಣ ನಿಲ್ಲಿಸಬೇಕು. ಎಲ್ಲ ಕಾರ್ಮಿಕರಿಗೆ ವಿಮೆ, ಇಎಸ್‌ಐ, ಪಿಎ್ ಸೌಲಭ್ಯ ಒದಗಿಸಬೇಕು. ಕಾರ್ಮಿಕ ಕಾನೂನುಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ, ಕಾರ್ಮಿಕ ಕಾನೂನುಗಳ ಉಲ್ಲಂಸುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಪ್ರತಿಭಟನೆಯಲ್ಲಿ ಸಂಘಟನೆ ಜಿಲ್ಲಾಧ್ಯಕ್ಷ ಎನ್.ಎಸ್.ವೀರೇಶ, ಪದಾಕಾರಿಗಳಾದ ಮಹೇಶ ಚೀಕಲಪರ್ವಿ, ಅಣ್ಣಪ್ಪ, ತಿರುಮಲರಾವ್, ಎಂ.ಶಿವರಾಜ, ಲಕ್ಷ್ಮಿ, ಈರಮ್ಮ, ವಿಜಯಲಕ್ಷ್ಮಿ, ಗಂಗಮ್ಮ, ಶಾರದಾ, ಗಾಯತ್ರಿ, ನರಸಪ್ಪ, ಬಸವರಾಜ, ರಾಘವೇಂದ್ರಗೌಡ, ಕರಿಲಿಂಗ, ಶರಣಗೌಡ, ರಾಮಾಂಜಿನೇಯ, ಭರತ್ ಪಾಲ್ಗೊಂಡಿದ್ದರು.