ರಿಮ್ಸ್ ಆಸ್ಪತ್ರೆಯಲ್ಲಿ ಅಗತ್ಯ ಮೂಲ ಸೌಕರ್ಯ ಕಲ್ಪಿಸಿ

30-10-Shiva-4
ರಿಮ್ಸ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ರಾಯಚೂರಿನ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಪ್ರಶಾಂತಕುಮಾರಗೆ ಅಖಿಲ ಭಾರತ ಡಾ.ಬಿ.ಆರ್.ಅಂಬೇಡ್ಕರ್ ಸೈನ್ಯದಿಂದ ಸೋಮವಾರ ಮನವಿ ಸಲ್ಲಿಸಲಾಯಿತು. ಸಂಘಟನೆ ಅಧ್ಯಕ್ಷ ಹನುಮಂತ, ಪದಾಕಾರಿಗಳಾದ ಆನಂದ ಏಗನೂರು, ಆಂಜಿನೇಯ, ಜೈರಾಜ್, ಗೋವಿಂದ, ಎಂ.ಡಿ.ರಾಜ್, ಪ್ರಕಾಶ, ಮಲ್ಲು, ರಘು, ಶಿವಪ್ಪ ಇದ್ದರು.
Published on

ರಾಯಚೂರು: ರಿಮ್ಸ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಅಗತ್ಯ ಸೌಕರ್ಯಗಳಿಲ್ಲದೆ ಸಮಸ್ಯೆ ಎದುರಿಸುತ್ತಿದ್ದು, ರೋಗಿಗಳು ಮತ್ತು ಜತೆಗಿದ್ದವರಿಗೆ ಅಗತ್ಯ ಸೌಲಭ್ಯ ಕಲ್ಪಿಸಲು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಅಖಿಲ ಭಾರತ ಡಾ.ಬಿ.ಆರ್.ಅಂಬೇಡ್ಕರ್ ಸೈನ್ಯ ಒತ್ತಾಯಿಸಿದೆ.
ಸಂಘಟನೆ ನಿಯೋಗ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಪ್ರಶಾಂತಕುಮಾರಗೆ ಸೋಮವಾರ ಮನವಿ ಸಲ್ಲಿಸಿ, ಆಸ್ಪತ್ರೆಯಲ್ಲಿ ರೋಗಿಗಳನ್ನು ಕರೆದುಕೊಂಡು ಹೋಗಲು ವೀಲ್‌ಚೇರ್ ಸೇರಿದಂತೆ ಅಗತ್ಯ ಸೌಲಭ್ಯಗಳಿಲ್ಲದ ಕಾರಣ ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ದೂರಿದರು.
ಆಸ್ಪತ್ರೆಯಲ್ಲಿ ಸರಿಯಾದ ಸಮಯಕ್ಕೆ ವೈದ್ಯರಿಲ್ಲದೆ ರೋಗಿಗಳು ಖಾಸಗಿ ಆಸ್ಪತ್ರೆಗೆ ಮೊರೆ ಹೋಗುವಂತಾಗಿದೆ. ಔಷಧಕ್ಕಾಗಿ ಹೊರಗೆ ತರುವಂತೆ ಚೀಟಿ ಬರೆದು ಕೊಡಲಾಗುತ್ತಿದ್ದು, ಸ್ವಚ್ಛತೆ ಕಾಪಾಡುತ್ತಿಲ್ಲ. ಕೂಡಲೇ ರೋಗಿಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸಿಕೊಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ನಿಯೋಗದಲ್ಲಿ ಸಂಘಟನೆ ಅಧ್ಯಕ್ಷ ಹನುಮಂತ, ಪದಾಕಾರಿಗಳಾದ ಆನಂದ ಏಗನೂರು, ಆಂಜಿನೇಯ, ಜೈರಾಜ್, ಗೋವಿಂದ, ಎಂ.ಡಿ.ರಾಜ್, ಪ್ರಕಾಶ, ಮಲ್ಲು, ರಘು, ಶಿವಪ್ಪ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net