ರೈತರಿಗೆ ವೈಜ್ಞಾನಿಕ ಬೆಳೆ ನಷ್ಟ ಪರಿಹಾರ ನೀಡಿ

04-12-Shiva-1
ರೈತರಿಗೆ ವೈಜ್ಞಾನಿಕ ಬೆಳೆ ನಷ್ಟ ಪರಿಹಾರ ನೀಡುವಂತೆ ಒತ್ತಾಯಿಸಿ ರಾಯಚೂರಿನ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಪ್ರಶಾಂತಕುಮಾರಗೆ ಆಮ್ ಆದ್ಮಿ ಜಿಲ್ಲಾ ಘಟಕದಿಂದ ಸೋಮವಾರ ಮನವಿ ಸಲ್ಲಿಸಲಾಯಿತು. ಪಕ್ಷದ ಜಿಲ್ಲಾಧ್ಯಕ್ಷ ಡಿ.ವೀರೇಶಕುಮಾರ, ಪದಾಕಾರಿಗಳಾದ ಇಸಾಕ್, ಈರೇಶ, ಸೈಯದ್ ಶೇಕ್ಷಾವಲಿ, ಮಕ್ಬೂಲ್ ಪಾಷಾ, ಕೃಷ್ಣ, ವಿಷ್ಣು ಯಾದವ, ಹಮೀದ್ ಇದ್ದರು.
Published on

ರಾಯಚೂರು: ಸರ್ಕಾರ ಕೇವಲ ಬರ ಘೋಷಣೆ ಮಾಡುವ ಮೂಲಕ ರೈತರಿಗೆ ನೆರವಿಗೆ ಧಾವಿಸದೆ ನಿರ್ಲಕ್ಷ ವಹಿಸಿದ್ದು, ಬೆಳೆ ಹಾನಿಗೊಳಗಾಗಿರುವ ರೈತರಿಗೆ ಪ್ರತಿ ಎಕರೆಗೆ 25 ಸಾವಿರ ರೂ. ಪರಿಹಾರ ನೀಡಬೇಕು ಎಂದು ಆಮ್ ಆದ್ಮಿ ಪಕ್ಷ ಒತ್ತಾಯಿಸಿದೆ.
ಪಕ್ಷದ ನಿಯೋಗ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಪ್ರಶಾಂತಕುಮಾರಗೆ ಸೋಮವಾರ ಮನವಿ ಸಲ್ಲಿಸಿ, ಸರ್ಕಾರ ವೈಜ್ಞಾನಿಕ ರೀತಿಯಲ್ಲಿ ಬೆಳೆ ಹಾನಿ ಸಮೀಕ್ಷೆ ನಡೆಸುವ ಮೂಲಕ ರೈತರಿಗೆ ಅನುಕೂಲವಾಗುವಂತೆ ಪರಿಹಾರ ನೀಡಲು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಮುಂಗಾರು ಮತ್ತು ಹಿಂಗಾರು ವಿಲವಾಗಿದ್ದರಿಂದ ಮಳೆಯಿಲ್ಲದೆ ರೈತರು ಬೆಳೆಗಳು ಸಂಪೂರ್ಣ ಹಾನಿಗೊಳಗಾಗಿವೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರಿಗೆ ಬೆಳೆ ಹಾನಿಗೆ ಪರಿಹಾರ ನೀಡದೆ ನಿರ್ಲಕ್ಷ ಧೋರಣೆ ತೋರುತ್ತಿವೆ. ಇದರಿಂದ ರೈತರು ಸಂಕಷ್ಟಕ್ಕೆ ಗುರಿಯಾಗುವಂತಾಗಿದೆ.
ಕುಡಿಯುವ ನೀರು ಮತ್ತು ಮೇವು ಸಂಗ್ರಹಕ್ಕೆ ಹಣ ಬಿಡುಗಡೆ ಮಾಡುವುದಾಗಿ ಹೇಳುತ್ತಿರುವ ಮುಖ್ಯಮಂತ್ರಿಗಳು ರೈತರಿಗೆ ಬೆಳೆಹಾನಿ ನಷ್ಟ ಪರಿಹಾರವಾಗಿ 2 ಸಾವಿರ ರೂ. ನೀಡುವುದಾಗಿ ಹೇಳುತ್ತಿರುವುದು ತೀವ್ರ ಖಂಡನೀಯವಾಗಿದೆ. ಕೂಡಲೇ ವೈಜ್ಞಾನಿಕ ಸಮೀಕ್ಷೆ ಆಧರಿಸಿ ಪರಿಹಾರ ನೀಡಲು ಕ್ರಮಕೈಗೊಳ್ಳಬೇಕು.
ಉದ್ಯೋಗ ಖಾತ್ರಿ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು. ಕೆಲಸದ ದಿನಗಳನ್ನು ಹೆಚ್ಚಿಸಬೇಕು. ಬೆಲೆ ಏರಿಕೆ ಹಿನ್ನೆಲೆಯಲ್ಲಿ ಪ್ರತಿ ಕುಟುಂಬಕ್ಕೆ ಉಚಿತ ಆಹಾರ ಒದಗಿಸಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.
ನಿಯೋಗದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಡಿ.ವೀರೇಶಕುಮಾರ, ಪದಾಕಾರಿಗಳಾದ ಇಸಾಕ್, ಈರೇಶ, ಸೈಯದ್ ಶೇಕ್ಷಾವಲಿ, ಮಕ್ಬೂಲ್ ಪಾಷಾ, ಕೃಷ್ಣ, ವಿಷ್ಣು ಯಾದವ, ಹಮೀದ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net