

ರಾಯಚೂರು: ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ನಾಡ ಕಚೇರಿಯ ಕಂಪ್ಯೂಟರ್ ಆಪರೇಟರ್ ಪರಮೇಶ ಆತ್ಮಹತ್ಯೆಗೆ ಕಾರಣರಾದವರ ವಿರುದ್ಧ ಕ್ರಮಕೈಗೊಳ್ಳಬೇಕು. ಕಂಪ್ಯೂಟರ್ ಆಪರೇಟರ್‌ಗಳಿಗೆ ಭದ್ರತೆ ಒದಗಿಸಬೇಕು ಎಂದು ಅಟಲ್‌ಜೀ ಜನಸ್ನೇಹಿ ಕೇಂದ್ರ ನೌಕರರ ಸಂಘ ಒತ್ತಾಯಿಸಿದೆ.
ಕಿರುಕುಳದಿಂದ ಪರಮೇಶ ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತನ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ಒದಗಿಸುವಂತೆ ಆಗ್ರಹಿಸಿದರು.
ಪರಮೇಶ ಕಳೆದ 12 ವರ್ಷಗಳಿಂದ ಕಂದಾಯ ಇಲಾಖೆಯಲ್ಲಿ ಕಂಪ್ಯೂಟರ್ ಆಪರೇಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ಮೇಲಾಕಾರಿಗಳ ಕಿರುಕುಳ ಹಾಗೂ ಅವಮಾನ ತಾಳದೆ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಪ್ರಕರಣಕ್ಕೆ ಸಂಬಂಸಿದಂತೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥ ಅಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕಂಪ್ಯೂಟರ್ ಆಪರೇಟರ್‌ಗಳಿಗೆ ಭದ್ರತೆ ಒದಗಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ನಿಯೋಗದಲ್ಲಿ ಸಂಘದ ಜಿಲ್ಲಾಧ್ಯಕ್ಷ ಸಿದ್ಧಲಿಂಗ, ಪದಾಕಾರಿಗಳಾದ ಹಸನ್, ನಿರ್ಮಲಾ, ಬಸನಗೌಡ, ಖಾಜಾ, ಬಸವರಾಜ, ಸಿದ್ದಪ್ಪ, ಕೋರವಯ್ಯ, ಶ್ರೀನಿವಾಸ, ಅಮರೇಶ, ಬಸವರಾಜ, ಚನ್ನಪ್ಪಗೌಡ, ಚನ್ನಬಸವ, ನಾಗಪ್ಪ, ವಿನಾಯಕ, ವೆಂಕಟೇಶ ಇದ್ದರು.