

ಹೂವಿನಹಗಡಲಿ: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲೆ ಹೊರಗುತ್ತಿಗೆ ನೌಕರರ ಸಂಘದ ತಾಲೂಕು ಘಟಕ ಗುರುವಾರ ತಹಸೀಲ್ದಾರ್ ಸಂತೋಷ ಕುಮಾರಗೆ ಮನವಿ ಸಲ್ಲಿಸಿತು.
ಕಳೆದ 15-20 ವರ್ಷಗಳಿಂದ ಅಲ್ಪ ಪ್ರಮಾಣದ ಸಂಬಳ ಪಡೆದು ಕಾರ್ಯನಿರ್ವಹಿಸುತ್ತಿದ್ದೇವೆ. ಸರ್ಕಾರದ ವಿವಿಧ ಇಲಾಖೆಯಡಿ ಬರುವ ವಸತಿ ಶಾಲೆ ಹಾಗೂ ಹಾಸ್ಟೆಲ್‌ಗಳಲ್ಲಿ ಇದುವರೆಗೆ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ನೌಕರರು ಯಾವುದೇ ವೃತ್ತಿ ಭದ್ರತೆ ಇಲ್ಲದೆ ಕೆಲಸ ಮಾಡುತ್ತಿದ್ದಾರೆ. ಬೀದರ್ ಜಿಲ್ಲೆಯ ಮಾದರಿಯಂತೆ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿಧೋದ್ದೇಶ ಸಹಕಾರಿ ಸಂಘವನ್ನು ಎಲ್ಲ ಜಿಲ್ಲೆಗಳಿಗೂ ವಿಸ್ತರಿಸಬೇಕು. ನೌಕರರಿಗೆ ಗುತ್ತಿಗೆದಾರರ ಬದಲಿಗೆ ನೇರವಾಗಿ ಅಡುಗೆ ಕೋಣೆಯಲ್ಲಿ ನೌಕರರ ಸುರಕ್ಷತೆಗೆ ಸಲಕರಣೆಗಳನ್ನು ಒದಗಿಸಬೇಕು.
ಸುಪ್ರೀಂಕೋರ್ಟ್ ಆದೇಶದಂತೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ಹಾಸ್ಟೆಲ್‌ಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ಶೌಚಗೃಹಗಳ ವ್ಯವಸ್ಥೆ ಕಲ್ಪಿಸಬೇಕು. ಹಾಸ್ಟೆಲ್‌ಗಳಲ್ಲಿ ರಾತ್ರಿ ಕಾವಲುಗಾರರನ್ನು ನೇಮಿಸಬೇಕು. 32 ವರ್ಷಗಳ ಹಿಂದೆ ಸ್ಥಾಪಿತವಾದ ಕನ್ನಡ ವಿವಿ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು ವಾರ್ಷಿಕ 10 ಕೋಟಿ ರೂ. ಅನುದಾನ ನೀಡಬೇಕು ಎಂದು ಒತ್ತಾಯಿಸಿದರು.