ವಸತಿ ವಂಚಿತ ಅಲೆಮಾರಿಗಳಿಗೆ ನಿವೇಶನ ನೀಡಿ

2
Published on

ವಿಜಯವಾಣಿ ಸುದ್ದಿಜಾಲ ಚಿಕ್ಕನಾಯಕನಹಳ್ಳಿ
ತಾಲೂಕಿನ ಗೌಡಗೆರೆಯಲ್ಲಿ ಇರುವಂತಹ 61 ಅಲೆಮಾರಿ ಸಮುದಾಯದ ಕುಟುಂಬಗಳಿಗೆ ಸರ್ಕಾರ 4 ಲಕ್ಷ ರೂ. ಅನುದಾನದಲ್ಲಿ ಮನೆಗಳನ್ನು ನಿರ್ಮಿಸಿಕೊಡಬೇಕು ಹಾಗೂ ಇತರ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ತಾಲೂಕು ಅಲೆಮಾರಿ ಬುಡಕಟ್ಟು ಮಹಾಸಭಾದಿಂದ ತಹಸೀಲ್ದಾರ್​ ಪುರಂದರ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.


ತಾಲೂಕು ಆಡಳಿತಸೌಧದಲ್ಲಿ ಮಹಾಸಭಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜಣ್ಣ ಮಾತನಾಡಿ, ಹುಳಿಯಾರು ಹೋಬಳಿಯ ಕೆಂಕೆರೆ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗೌಡಗೆರೆ ಸರ್ವೇ ನಂ. 20/ಪಿ1ರಲ್ಲಿ ಹೋಬಳಿಯ ಅಲೆಮಾರಿ ಜನಾಂಗದವರಿಗೆ 34 ನಿವೇಶನ ಈಗಾಗಲೇ ಹಂಚಿಕೆ ಮಾಡಲಾಗಿದೆ. ಆದರೆ, ಮನೆ ನಿರ್ಮಿಸಿಕೊಳ್ಳಲು ನಮ್ಮ ವಿಶೇಷ 4 ಲ ಅನುದಾನದ ಬದಲಿಗೆ ಕೇವಲ 1.20 ಲ ರೂ. ನೀಡುವುದಾಗಿ ಹೇಳುತ್ತಿದ್ದಾರೆ. ಅದ್ದರಿಂದ ಈ ಅನುದಾನದಲ್ಲಿ ಮನೆ ನಿರ್ಮಿಸಲು ಸಾಧ್ಯವಾಗುವುದಿಲ್ಲ. ಅದ್ದರಿಂದ ನಮಗೆ ನಮ್ಮ ಅನದಾನ ನೀಡಬೇಕೆಂದು ಹಾಗೂ ಗೌಡಗೆರೆ ಸರ್ವೇ ನಂ.20/ಪಿ1ರಲ್ಲಿ ಬರುವ 30 ಗುಂಟೆ ಜಮೀನಿನಲ್ಲಿ ಇನ್ನೂ 27 ಅಲೆಮಾರಿ ಕುಟುಂಬಗಳಿಗಾಗಿ ನಿವೇಶನ ನೀಡಲು ಕ್ರಮ ಕೈಗೊಳ್ಳಬೇಕು. ತಾಲೂಕು ಆಡಳಿತ ಹಾಗೂ ತಾಪಂ ಮತ್ತು ಗ್ರಾಪಂ ಈ ಬಗ್ಗೆ ಗಮನಹರಿಸಿ ವಸತಿ ವಂಚಿತ ಅಲೆಮಾರಿ ಸಮುದಾಯದ ಕುಟುಂಬಗಳು ಮನೆ ಕಟ್ಟಿಕೊಳ್ಳಲು ತ್ವರಿತವಾಗಿ ಅನುವು ಮಾಡಿಕೊಡಬೇಕು ಎಂದು ತಿಳಿಸಿದರು.


ಅಲೆಮಾರಿ ಬುಡಕಟ್ಟಿನ ರೇಣುಕಮ್ಮ ಮಾತನಾಡಿ, ಅಲೆಮಾರಿ ಮಕ್ಕಳ ಹಕ್ಕುಗಳ ರಣೆ, ಶೈಣಿಕ ಅಭಿವೃದ್ಧಿ, ವ್ಯಸನಮುಕ್ತ ಹಾಗೂ ಸದೃಢವಾದ ಬೆಳವಣಿಗೆಗೆ ಸಂಬಂಧಿಸಿದಂತೆ ಇರುವ ಕಾರ್ಯಸೂಚಿಗಳು ಅನುಷ್ಠಾನಗೊಳ್ಳಬೇಕು. ಆದರೆ ಇವ್ಯಾವು ನಿಯಮಿತವಾಗಿ ಅಲೆಮಾರಿಗಳಿಗೆ ಲಭಿಸುತ್ತಿಲ್ಲ. ಹಾಗಾಗಿ ತಾಲೂಕಿನ ಅಲೆಮಾರಿಗಳು ತಹಸೀಲ್ದಾರ್​ ಭೇಟಿ ಮಾಡಿ ಮನವಿ ಸಲ್ಲಿಸಿದ್ದೇವೆ ಎಂದು ತಿಳಿಸಿದರು.
ತಹಸೀಲ್ದಾರ್​ ಕೆ.ಪುರಂದರ ಮಾತನಾಡಿ, ಈಗಾಗಲೇ ನಿವೇಶನ ನೀಡಿರುವರಿಗೆ ಮನೆ ನಿರ್ಮಿಸಿಕೊಳ್ಳಲು ಅಗತ್ಯ ನೆರವು ಹಾಗೂ ನಿವೇಶನ ರಹಿತರಿಗೆ ನಿವೇಶನ ವಿತರಿಸುವ ಬಗ್ಗೆ ಮೇಲಧಿಕಾರಿಗಳಿಗೆ ವರದಿ ನೀಡುವುದಾಗಿ ತಿಳಿಸಿದರು.


ಸುಡುಗಾಡು ಸಿದ್ದರ ಸಂಟನೆಯ ಜಿಲ್ಲಾಧ್ಯ ವೆಂಕಟೇಶ್​, ತಾಲೂಕು ಅಲೆಮಾರಿ ಬುಡಕಟ್ಟು ಮಹಾಸಭಾದ ಅಧ್ಯ ರಂಗನಾಥ್​ ಸೇರಿದಂತೆ ಮಹಿಳೆಯರಾದ ಹೊನ್ನಲಮ್ಮ, ನರಸಮ್ಮ ರೇಖಾ, ಜ್ಯೋತಿ, ದುರ್ಗಪ್ಪ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net