

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಹಲವಾರು ವರ್ಷಗಳ ಕಾಲ ಪಕ್ಷಕ್ಕಾಗಿ ದುಡಿದಿರುವ ದಲಿತ ಸಮುದಾಯದ ಮುಖಂಡರಿಗೆ ಸೂಕ್ತ ಸ್ಥಾನಮಾನ ಕಲ್ಪಿಸಿಕೊಡಬೇಕು ಎಂದು ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ಹಿರೇಮಗಳೂರು ರಾಮಚಂದ್ರ ಶನಿವಾರ ರಾಜ್ಯಸಭಾ ಸದಸ್ಯ ಜಯರಾಮ್ ರಮೇಶ್ ಅವರನ್ನು ಒತ್ತಾಯಿಸಿದರು.
ರಾಜ್ಯಸಭಾ ಸದಸ್ಯ ಜಯರಾಮ್‌ರಮೇಶ್ ಅವರು ಶನಿವಾರ ನಗರದ ಪಕ್ಷದ ಕಚೇರಿಗೆ ಆಗಮಿಸಿದ ಸಂದರ್ಭದಲ್ಲಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿ ಮಾತನಾಡಿದ ಅವರು, ಇಂದಿರಾಗಾAಧಿ ಕಾಲಘಟ್ಟದಿಂದ ಇಲ್ಲಿಯವರೆಗೂ ಜಿಲ್ಲೆಯ ಐದು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವಿಗೆ ಕಾರಣಕರ್ತರಾಗಿರುವ ದಲಿತ ಸಮುದಾಯಕ್ಕೆ ಜಿಲ್ಲಾ ಮಟ್ಟದಲ್ಲಿ ಸಮರ್ಪಕ ಸ್ಥಾನ ಕಲ್ಪಿಸದಿರುವುದು ನೋವುಂಟು ಮಾಡಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಪ್ರಸ್ತುತ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ತಮ್ಮನ್ನು ಆಯ್ಕೆಗೊಳಿಸಿದರೆ ದಲಿತ ಜನಾಂಗದ ಬೆಳವಣಿಗೆಗೆ ಒತ್ತು ನೀಡಿದಂತಾಗುತ್ತದೆ. ಮೂರುವರೆ ದಶಕಗಳ ಸಕ್ರಿಯ ಕಾರ್ಯಕರ್ತನಾಗಿ, ಬೂತ್‌ಮಟ್ಟದಿಂದ ಕಾರ್ಯನಿರ್ವಹಿಸಿ ಹಾಗೂ ಪಕ್ಷದ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿರುವ ತಮಗೆ ಸಿಡಿಎ ಅಧ್ಯಕ್ಷ ಸ್ಥಾನ ಕಲ್ಪಿಸಿಕೊಡಬೇಕು ಎಂದು ಮನವಿ ಮಾಡಿದರು.
ಮುಂಬರುವ ದಿನಗಳಲ್ಲಿ ಜಿಪಂ ಹಾಗೂ ತಾಪಂ ಚುನಾವಣೆಗಳು ಬರಲಿರುವ ಹಿನ್ನೆಲೆಯಲ್ಲಿ ದಲಿತ ಜನಾಂಗಕ್ಕೆ ಸ್ಥಾನಮಾನ ಕಲ್ಪಿಸದಿದ್ದಲ್ಲಿ ಆ ಸಮಾಜದ ಪ್ರಶ್ನೆಗಳಿಗೆ ಉತ್ತರಿಸಲು ಸಾಧ್ಯವಾಗುವುದಿಲ್ಲ. ಈ ಬಗ್ಗೆ ಗಂಭೀರವಾಗಿ ಆಲೋಚಿಸಿ ಜಿಲ್ಲಾ ಮಟ್ಟದಲ್ಲಿ ಸ್ಥಾನ ದೊರಕಿಸಿಕೊಟ್ಟರೆ ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಗೆಲುವು ಲಭಿಸಲು ಸಾಧ್ಯವಾಗಲಿದೆ ಎಂದು ತಿಳಿಸಿದರು.
ಈ ಬಾರಿ ಸಿಡಿಎ ಅಧ್ಯಕ್ಷ ಸ್ಥಾನ ದಲಿತ ಸಮುದಾಯದವರಾದ ತಮಗೆ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿz್ದೆÃನೆ. ಹೀಗಾಗಿ ಜಿಲ್ಲೆಯ ದಲಿತ ಜನಾಂಗದ ಬೆಳವಣಿಗೆಗೆ ರಾಜ್ಯಸಭಾ ಸದಸ್ಯರು ಸಹಕರಿಸಬೇಕು ಎಂದು ಒತ್ತಾಯಿಸಿದರು.
ರಾಜ್ಯಸಭಾ ಸದಸ್ಯರ ಸಲಹೆ ಮೇರೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಅಂಶುಮAತ್, ಜಿಲ್ಲೆಯಲ್ಲಿ ಪಕ್ಷ ವನ್ನು ಬಲಗೊಳಿಸಲು ದಲಿತ ಸಮುದಾಯದ ಶ್ರಮ ಸಾಕಷ್ಟಿದೆ. ಹಾಗಾಗಿ ಸಾಮಾಜಿಕ ನ್ಯಾಯ ಒದಗಿಸ ಪಕ್ಷವು ಕಟಿಬದ್ಧವಾಗಿದೆ. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ಆದೇಶದನ್ವಯ ಸಾಮಾಜಿಕ ನ್ಯಾಯ ಒದಗಿಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ತನೋಜ್ ನಾಯ್ಡು ಸೇರಿದಂತೆ ವಿವಿಧ ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದರು.