ಗಣೇಶ ಮೂರ್ತಿ ವಿಸರ್ಜನೆ ವೇಳೆ ತೆಪ್ಪ ಬಳಕೆಗೆ ನಿಬಂಧನೆ

IMG_8160
Published on

ಶಿವಮೊಗ್ಗ: ಹೊಳೆ, ನದಿ, ಕೆರೆ, ಹಿನ್ನೀರು ಪ್ರದೇಶದಲ್ಲಿ ಗಣಪತಿ ಮೂರ್ತಿ ವಿಸರ್ಜಿಸಲು ತೆಪ್ಪ ಬಳಕೆ ಮಾಡಿದಲ್ಲಿ ಮೂರರಿಂದ ನಾಲ್ಕು ಜನರಿಗೆ ಮಾತ್ರ ತೆಪ್ಪ ಬಳಸಲು ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಅವಕಾಶ ನೀಡಿ ಆದೇಶಿಸಿದ್ದಾರೆ.
ತೆಪ್ಪದ ಮೂಲಕ ಗಣೇಶ ವಿಸರ್ಜನೆ ಮಾಡುವ ವೇಳೆ ಸಂಭವಿಸಬಹುದಾದ ದುರ್ಘಟನೆಗಳನ್ನು ತಪ್ಪಿಸಲು ಹಾಗೂ ಎಸ್ಪಿ ಜಿ.ಕೆ.ಮಿಥುನ್‌ಕುಮಾರ್ ಶಿಫಾರಸಿನ ಮೇರೆಗೆ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಅಲ್ಲದೆ, ಕಡ್ಡಾಯವಾಗಿ ಲೈಫ್-ಜಾಕೇಟ್, ನುರಿತ ಈಜುಗಾರರು ಇದ್ದು ಗಣಪತಿ ಮೂರ್ತಿಯನ್ನು ವಿಸರ್ಜನೆ ಮಾಡಬೇಕು ಎಂದು ಸೂಚಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net