ಬೆಳಗಾವಿಯಲ್ಲಿ ಗ್ರಾಹಕರ ವ್ಯಾಜ್ಯಗಳ ಪರಿಹಾರ ಕಾಯಂ ಪೀಠ ಸ್ಥಾಪಿಸಿ

Screenshot_20240108_191305_WhatsApp.jpg
Published on

ಬೆಳಗಾಚಿ: ಬೆಳಗಾವಿಯಲ್ಲಿ  ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಕಾಯಂ ಪೀಠವನ್ನು ಆರಂಭಿಸಬೇಕು ಎಂದು ಆಗ್ರಹಿಸಿ ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ  ಅಹಿಂದ ನ್ಯಾಯವಾದಿಗಳ ಸಂಘದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು. ಬಳಿಕ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ಕಳೆದ ನಾಲ್ಕೈದು ವರ್ಷಗಳಿಂದ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಕಾಯಂ ಪೀಠವನ್ನು ಸ್ಥಾಪಿಸುವಂತೆ ಆಗ್ರಹಿಸಿ ಹೋರಾಟ ನಡೆಸಿರುವ ಪರಿಣಾಮ  ಬೆಳಗಾವಿಯಲ್ಲಿ ಪೀಠ ಸ್ಥಾಪನೆಗೆ ಶಿಾರಸ್ಸು ಮಾಡಿ ಕಟ್ಟಡವನ್ನು ಗುರುತಿಸಲಾಗಿದೆ. ಆದರೆ,  ಇಲ್ಲಿಯವರೆಗೆ ಪೀಠ ಕಾರ್ಯಾರಂಭ ಮಾಡಿಲ್ಲ. ಕೂಡಲೇ ಪೀಠ ಕಾರ್ಯಾರಂಭ ಮಾಡಲು ಸರ್ಕಾರ ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.
ಬೆಳಗಾವಿ ಮಹಾನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಹಕಾರಿ ಹಾಗೂ ಸೌಹಾರ್ದ ಸೊಸೈಟಿಗಳು ಠೇವಣಿದಾರರಿಗೆ  ವಂಚನೆ ಮಾಡುತ್ತಿವೆ. ಠೇವಣಿದಾರರು ಬೆಂಗಳೂರಿಗೆ ಹೋಗಿ ದಾಖಲೆಗಳನ್ನು ನೀಡಬೇಕಾದ ಪರಿಸ್ಥಿತಿ ಬಂದಿದೆ. ಮಹಿಳೆಯರು, ಹಿರಿಯ ನಾಗರಿಕರು ಬೆಂಗಳೂರಿಗೆ ಹೋಗಿ ಬರುವುದು ಕಷ್ಟವಾಗುತ್ತಿದೆ. ಹಾಗಾಗಿ ಕೂಡಲೇ ಕೆಪಿಐಡಿ ನ್ಯಾಯಾಲಯವನ್ನು  ಸ್ಥಾಪನೆ ಮಾಡಬೇಕು ಎಂದು ಮನವಿ ಮೂಲಕ ಒತ್ತಾಯಿಸಿದರು.
ನ್ಯಾಯವಾದಿ ಎನ್.ಆರ್.ಲಾತೂರ್, ವಿಎಸ್.ಪಾಟೀಲ, ನಿಂಗಪ್ಪ ಮಾಸ್ತಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net