ಪಿ.ಎಸ್.ಐ ಪರೀಕ್ಷಾ ಪೂರ್ವ ತರಬೇತಿ ಅವಧಿ ವಿಸ್ತರಣೆ

Published on

ಮಂಗಳೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ) ಬೆಳಗಾವಿ/ಮೈಸೂರು ಕಂದಾಯ ವಿಭಾಗಗಳ ಮಹಿಳಾ ಮತ್ತು ಪುರುಷ ಯುವ ಜನರಿಗೆ 90 ದಿನಗಳ ಹಾಸ್ಟೆಲ್ ಸೌಭ್ಯದೊಂದಿಗೆ ಪೋಲಿಸ್ ಸಬ್ ಇನ್ಸಪೆಕ್ಟರ್(ಪಿ.ಎಸ್.ಐ) ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವೆಬ್‌ಸೈಟ್ ಠಿಠಿ://ಛಿಜ್ಞಿಜ್ಠಛ್ಟಿಜ್ಚಿಛಿ.ಚ್ಟ್ಞಠಿ.ಜಟ.ಜ್ಞಿ/ ಅಥವಾ ಡಿಡಿಡಿ.ಟಞ.ಚ್ಟ್ಞಠಿ.ಜಟ.ಜ್ಞಿ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜೂನ್ 15ರ ವರೆಗೆ ಅವಧಿ ವಿಸ್ತರಿಸಲಾಗಿದೆ. ಅಭ್ಯರ್ಥಿಗಳು ಪದವಿಯಲ್ಲಿ ಪಡೆದ ಅಂಕಗಳ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಅಭ್ಯರ್ಥಿಗಳ ಸಾಮಾನ್ಯ ಅರ್ಹತೆ ಮತ್ತು ಇತರ ಹೆಚ್ಚಿನ ಮಾಹಿತಿಗೆ ಇಲಾಖೆಯ ವೆಬ್‌ಸೈಟ್ ಠಿಠಿ://ಟಞ.ಚ್ಟ್ಞಠಿ.ಜಟ.ಜ್ಞಿ/ ಅಥವಾ ಸಹಾಯವಾಣಿ: 8277799990 ಅಥವಾ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರವನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net