

ಕಲಬುರಗಿ: ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸೈನಿಕನೋರ್ವನನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಸರೂರು ಗ್ರಾಮದ ನಿವಾಸಿ ತಿಮ್ಮಪ್ಪ ಮಾನೆ (38) ಬಂಧಿತ ಆರೋಪಿ. ಕಲಬುರಗಿ ನಗರದ ಖಾಸಗಿ ಶಾಲೆಯಲ್ಲಿನ ಪರೀಕ್ಷಾ ಕೇಂದ್ರದಲ್ಲಿ ಈತ ಎಲೆಕ್ಟ್ರಾನಿಕ್ ಬ್ಲೂಟೂತ್ ಡಿವೈಸ್ ಬಳಸಿ ಪರೀಕ್ಷೆ ಬರೆದು, ಮಾಜಿ ಸೈನಿಕ ಕೋಟಾದಲ್ಲಿ ರ್ಯಾಂಕ್ ಪಡೆದಿದ್ದ ಎಂದು ತಿಳಿದುಬಂದಿದೆ.
ಅಕ್ರಮದ ಕಿಂಗ್‌ಪಿನ್ ರುದ್ರಗೌಡ ಪಾಟೀಲ ಜೊತೆ ಡೀಲ್ ಕುದುರಿಸಿಕೊಂಡು ತಿಮ್ಮಪ್ಪ ಮಾನೆ ಪರೀಕ್ಷೆ ಬರೆದು ಪಿಎಸ್ಐ ಆಗುವ ಕನಸು ಕಂಡಿದ್ದನಂತೆ.