

ಬೆಳಗಾವಿ: ತಾಲೂಕಿನ ಬಾಳೇಕುಂದ್ರಿ ಗ್ರಾಮದಲ್ಲಿ ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣದಲ್ಲಿ ನಿರ್ಲಕ್ಷ್ಯ , ನಿರ್ವಾಹಕನ ಮೇಲೆ ಪೋಕ್ಸೋ ಕೇಸ್ ಹಾಕಿ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದ ಮಾರಿಹಾಳ ಠಾಣೆ ಪಿಐ ಜೆ.ಐ. ಕಲ್ಯಾಣಶೆಟ್ಟಿ ವರ್ಗಾವಣೆಗೊಳಿಸಿ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ತಕ್ಷಣದಿಂದ ಜಾರಿಗೆ ಬರುವಂತೆ ಸಿಸಿಆರ್ ಬಿ ಘಟಕದ ಪಿಐ ಮಂಜುನಾಥ ನಾಯಕ ಅವರನ್ನು ಮಾರಿಹಾಳ ಠಾಣೆಗೆ ವರ್ಗಾವಣೆ ಗೊಂಡಿದ್ದಾರೆ. ಮಾರಿಹಾಳ ಪಿಐ ಜೆ.ಐ. ಕಲ್ಯಾಣಶೆಟ್ಟಿ ಸಿಸಿಆರ್ ಬಿ ಘಟಕಕ್ಕೆ ವರ್ಗಾವಣೆಗೊಳಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ತಿಳಿಸಿದ್ದಾರೆ.