ಪಿಎಸ್​ಐ ಅಕ್ರಮ ಪ್ರಕರಣ: ಬ್ಲ್ಯಾಕ್​ಮೇಲ್​ ಮಾಡಿ ಹಣ ವಸೂಲಿ ಮಾಡಿದ್ದ ಲಿಂಗಸಗೂರು ಡಿವೈಎಸ್​​ಪಿ ಅಮಾನತು

Mallikarjun sali
Published on

ರಾಯಚೂರು: ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ‌ ಪ್ರಕರಣದಲ್ಲಿ ಎರಡು ದಿನಗಳ ಹಿಂದಷ್ಟೇ ಬಂಧನಕ್ಕೊಳಗಾಗಿದ್ದ ಡಿವೈಎಸ್​ಪಿ ಅವರನ್ನು ಶನಿವಾರ ಅಮಾನತುಗೊಳಿಸಿ ಆದೇಶಿಸಲಾಗಿದೆ.

ರಾಯಚೂರು ಜಿಲ್ಲೆಯ ಲಿಂಗಸೂಗುರು ಡಿವೈಎಸ್​ಪಿ ಮಲ್ಲಿಕಾರ್ಜುನ್ ಸಾಲಿ ಅವರನ್ನು ಅಮಾನತ್ತುಗೊಳಿಸಲಾಗಿದೆ. ಪಿಎಸ್ಐ ಪರೀಕ್ಷೆಯ ಅಕ್ರಮದ ಬಗ್ಗೆ ಮಾಹಿತಿ ಪಡೆದು ಜ್ಞಾನ ಜ್ಯೋತಿ ಶಾಲೆಯ ಕಾರ್ಯದರ್ಶಿ ,‌ಹೆಡ್‌ ಮಾಸ್ಟರ್ ಗೆ ಬ್ಲ್ಯಾಕ್ ಮೇಲ್ ಮಾಡಿ‌ದ್ದ ಸಾಲಿ ಹಣ ವಸೂಲಿಗೆ ಬೇಡಿಕೆ ಇಟ್ಟಿದ್ದರು.

ಪ್ರಕರಣವನ್ನು ಮುಚ್ಚಿಹಾಕಲು 10 ಲಕ್ಷ ರೂ. ಹಣವನ್ನು ವಸೂಲಿ ಮಾಡಿರುವ ಆರೋಪ ಇವರ ಮೇಲಿದೆ. ಸದ್ಯ ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net