

ಧಾರವಾಡ: ಸ್ವರಸಾಮ್ರಾಟ ಪಂ. ಬಸವರಾಜ ರಾಜಗುರು ರಾಷ್ಟಿçÃಯ ಸ್ಮಾರಕ ಟ್ರಸ್ಟ್ ವತಿಯಿಂದ ಸ್ವರ ಸಾಮ್ರಾಟ, ಪದ್ಮಭೂಷಣ ಪಂ. ಬಸವರಾಜ ರಾಜಗುರು ಅವರ 103ನೇ ಜನ್ಮದಿನಾಚರಣೆ ಹಾಗೂ ರಾಷ್ಟಿçÃಯ ಪ್ರಶಸ್ತಿ ಪ್ರದಾನ ಮತ್ತು ಸಂಗೀತೋತ್ಸವ ಕಾರ್ಯಕ್ರಮವನ್ನು ಆ. 24ರಂದು ಸಂಜೆ 5.30 ಗಂಟೆಗೆ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹಾಗೂ ಸಭಾಪತಿ ಬಸವರಾಜ ಹೊರಟ್ಟಿ ಗೌರವ ಉಪಸ್ಥಿತರಿರುವರು. ಕಾರ್ಮಿಕ ಸಚಿವ ಸಂತೋಷ ಲಾಡ್ ಉದ್ಘಾಟಿಸುವರು. ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ವಿಶೇಷ ಅತಿಥಿಯಾಗಿ ಪಾಲ್ಗೊಳ್ಳುವರು. ಶಾಸಕ ಅರವಿಂದ ಬೆಲ್ಲದ ಅಧ್ಯಕ್ಷತೆ ವಹಿಸುವರು.
ಜಿಲ್ಲಾಽಕಾರಿ ಗುರುದತ್ತ ಹೆಗಡೆ, ಮಹಾನಗರ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ, ಜಿಲ್ಲಾ ಪಂಚಾಯಿತಿ ಸಿಇಒ ಸ್ವರೂಪಾ ಟಿ.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿ ಲೋಕೇಶ ಜಗಲಾಸರ್, ಮಹಾನಗರ ಪಾಲಿಕೆಯ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಬಸವರಾಜ ಹೂಗಾರ ಭಾಗವಹಿಸುವರು ಎಂದು ಟ್ರಸ್ಟ್ ಪ್ರಕಟಣೆ ತಿಳಿಸಿದೆ.