

ವಿಜಯವಾಣಿ ಸುದ್ದಿಜಾಲ ಧಾರವಾಡ
ನಗರದ ಚಿಲಿಪಿಲಿ ಸಂಗೀತ ಸಾಂಸ್ಕೃತಿಕ ಕಲಾ ಅಕಾಡೆಮಿಯು ತಬಲಾ ಕ್ಷೇತ್ರದಲ್ಲಿ ಸಾಧನೆಗೈಯುತ್ತಿರುವ ಪ್ರತಿಭಾನ್ವಿತ ಸಾಧಕರಿಗೆ ಕೊಡಮಾಡುವ ತಬಲಾ ಮಾಂತ್ರಿಕ ಪಂ. ರವಿ ಕೂಡ್ಲಗಿ ಪ್ರಶಸ್ತಿಗೆ ಬೆಂಗಳೂರಿನ ಖ್ಯಾತ ತಬಲಾ ವಾದಕ ಪಂ. ರವೀಂದ್ರ ಯಾವಗಲ್ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು 10,000 ರೂಪಾಯಿ ನಗದು, ಪ್ರಶಸ್ತಿ ಫಲಕ ಒಳಗೊಂಡಿದೆ. ಡಿ. 15ರಂದು ನಗರದ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಜರುಗುವ ಪಂ. ರವಿ ಕೂಡ್ಲಗಿಯವರ 10ನೇ ಪುಣ್ಯಸ್ಮರಣೆ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.